ಹಾಸನ: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು – 10 ಹುದ್ದೆ, ಹಿರಿಯ ಸ್ಥಾನೀಯ ವೈದ್ಯರು -12, ಟ್ಯೂಟರ್-12 ಹಾಗೂ ರೀಸರ್ಚ್ ಸೈಂಟಿಸ್ಟ್ – 1 (Medical – 01 ಹುದ್ದೆಗಳನ್ನು 06 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಮೇ30 ರಂದು ಬೆಳಗ್ಗೆ 9.30 ರಿಂದ 5.30 ರವರೆಗೆ ಹಿಮ್ಸ್ನಲ್ಲಿ ನೇರ ಸಂದರ್ಶನ ನಿಗದಿಪಡಿಸಿದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಹಿಮ್ಸ್ ಆಡಳಿತಾಧಿಕಾರಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ತಿಳಿಸಿದೆ.
ಅರ್ಜಿ ನಮೂನೆ, ವಿದ್ಯಾರ್ಹತೆ, ಮೀಸಲಾತಿ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.himshassan.karnataka.gov.in ಸಂಪರ್ಕಿಸಬಹುದು.




