ಬೆಂಗಳೂರು: ಟರ್ಕಿಯಲ್ಲಿರುವ ಇಸ್ತಾನ್ಬುಲ್ ಕಾಂಗ್ರೆಸ್ ಕೇಂದ್ರದ ಕಚೇರಿ ತೋರಿಸಿ ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಕಚೇರಿಯಾಗಿದೆ ಎಂದು ಎಂದು ಹೇಳಿದ್ದ ಬಿಜೆಪಿ ನಾಯಕ ಅಮಿತ್ ಮಾಳವೀಯ ಮತ್ತು ಬಿಜೆಪಿ ಬೆಂಬಲಿಗ ಅರ್ನಾಬ್ ಗೋಸ್ವಾಮಿ ರಾಜ್ಯ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಯುವ ಕಾಂಗ್ರೆಸ್ ನಾಯಕ ಸ್ವರೂಪ್ ಪೊಲೀಸರಿಗೆ ದೂರು ನೀಡಿದ್ದಾರೆ.
ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ಅವರ ನಡೆ ಭಾರತದ ಪ್ರಜಾಪ್ರಭುತ್ವದ ಅಡಿಪಾಯ, ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ನಡೆಸಿದ ದುರುದ್ದೇಶಪೂರ್ವಕ ದಾಳಿಯಾಗಿದೆ ಎಂದು ಸ್ವರೂಪ್ ದೂರಿನಲ್ಲಿ ತಿಳಿಸಿದ್ದಾರೆ.
ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ಅವರು ಬಹಿರಂಗವಾಗಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಘೋರ ಮತ್ತು ಕ್ರಿಮಿನಲ್ ಪ್ರೇರಿತ ಅಭಿಯಾನದ ಮಾಸ್ಟರ್ ಮೈಂಡ್ ಆಗಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದಾರೆ.
ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು) ಅಡಿಯಲ್ಲಿ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.




