ಮೈಸೂರು: ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ಮೈಸೂರಿನ ಹಿನಕಲ್ ನಲ್ಲಿ ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್ ಗಳನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದ ಅವರು, 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು ಎಂದರು.
ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.
ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.



