ಅರ್ಜಿ ಆಹ್ವಾನ
ಬಳ್ಳಾರಿ: ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್ಗಳು, ಕೇಂದ್ರ ಸರ್ಕಾರಿ ಕಚೇರಿಗಳು, ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, 2025-26ನೇ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರ ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.
ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನಗರದ ಡಾ. ರಾಜ್ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ನೀಡಲಾಗುತ್ತದೆ.
ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂ.06 ರೊಳಗಾಗಿ ಅರ್ಜಿಯನ್ನು ಡಾ.ರಾಜ್ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-275182 ಗೆ ಸಂಪರ್ಕಿಸಬಹುದು.




