9 ಮನೆ ಕಳ್ಳತನ ಪ್ರಕರಣಗಳನ್ನು ಬೇಧಿಸಲಾಗಿದೆ: ಬಿ ದಯಾನಂದ

11 months ago

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ಆರೋಪಿಯಿಂದ 188 ಗ್ರಾಂ ಚಿನ್ನಾಭರಣ, 550 ಗ್ರಾಂ ಬೆಳ್ಳಿಯ ವಸ್ತುಗಳು, ₹1,500 ನಗದು ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ ₹16,50,000/- ಆಗಿದೆ. ಈ ಬಂಧನದೊಂದಿಗೆ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 9 ಮನೆ ಕಳ್ಳತನ ಪ್ರಕರಣಗಳನ್ನು ಬೇಧಿಸಲಾಗಿದೆ ಎಂದರು.

ಸಾರ್ವಜನಿಕರು ತಮ್ಮ ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ ಬಾಗಿಲು, ಕಿಟಕಿ, ಗೇಟ್‌ಗಳಿಗೆ ಬಿಗಿಯಾದ ಲಾಕ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ ಮತ್ತು ನೆರೆಹೊರೆಯವರ ಗಮನಕ್ಕೆ ತರುವುದು ಸೇರಿದಂತೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.

ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ, ತಕ್ಷಣವೇ Namma 112 ಗೆ ಕರೆ ಮಾಡುವಂತೆ ನಾಗರಿಕರಿಗೆ ಕರೆ ನೀಡಿದರು.

Leave a Reply