ಬಳ್ಳಾರಿ: ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯವನ್ನು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಉದ್ಘಾಟಿಸಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಬಳಿಕ ಮಾತನಾಡಿದ ಅವರು, ಯಾವುದೇ ಅಡ್ಡ ಪರಿಣಾಮಗಳಿಲ್ಲದ ಆಯುರ್ವೇದ ಚಿಕಿತ್ಸಾಲಯದ ಸೇವೆಗಳನ್ನು ಸಮರ್ಪಕವಾಗಿ ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ನಾಗರಿಕರಿಗೆ ಕರೆನೀಡಿದರು.
ಪ್ರತಿ ಖಾಯಿಲೆಗೂ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಉತ್ತಮವಾದ ಚಿಕಿತ್ಸೆ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಚಿಕಿತ್ಸಾಲಯದ ಸೇವೆಯನ್ನು ಸದುಪಯೋಗ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕೋಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೊಡ್ಡಬಸಮ್ಮ, ಉಪಾಧ್ಯಕ್ಷ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ, ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಕೆ.ಪಿ.ಕಲ್ಯಾಣಿ ಸೇರಿದಂತೆ ಕೋಳೂರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಸಾರ್ವಜನಿಕರು ಮತ್ತು ಚಿಕಿತ್ಸಾಲಯದ ಸಿಬ್ಬಂದಿ ಹಾಜರಿದ್ದರು.




