ಬಳ್ಳಾರಿ: ಕುರೇಕುಪ್ಪ ಪುರಸಭೆ ವತಿಯಿಂದ 2025-26 ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ಶೇ.24.10 ಮತ್ತು ಶೇ.7.25 ರಡಿ ಕಾಯ್ದಿರಿಸಿದ ಅನುದಾನದಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸೌಲಭ್ಯದ ವಿವರ: ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು, ಸ್ವಯಂ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್ನಿಂದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ, ಪ.ಜಾತಿ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು(2024-25) ಸಹಾಯಧನ ನೀಡಲಾಗುತ್ತದೆ.
ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ವಿಶೇಷ ಚೇತನ ಫಲಾನುಭವಿಗಳಿಗೆ ಶ್ರವಣ ಯಂತ್ರ, ವೀಲ್ಚೇರ್, ವಾಕರ್ ಹಾಗೂ ಇತರೆ ಸಾಧನ ಸಲಕರಣೆಗಳ ಖರೀದಿಗಾಗಿ ಸಹಾಯ ಧನ, ಬ್ಯಾಂಕ್ನಿಂದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ ನೀಡಲಾಗುತ್ತದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಪುರಸಭೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 24 ರೊಳಗಾಗಿ ಸಲ್ಲಿಸಬೇಕು.
ತಡವಾಗಿ ಬಂದ ಮತ್ತು ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುರೆಕುಪ್ಪ ಪುರಸಭೆ ಕಚೇರಿಗೆ ಸಂಪರ್ಕಿಸಬಹುದು.



