ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕಗಳ ಅಳವಡಿಕೆ ಸೇರಿ ಸರ್ಕಾರಿ ಕಾಗದಪತ್ರಗಳು ಮರಾಠಿ ಭಾಷೆಯಲ್ಲಿ ಕಡ್ಡಾಯವಾಗಿ ಮಾಡಬೇಕು ಎಂದು ಎಂಇಎಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಎಂಇಎಸ್ ಕಾರ್ಯಕರ್ತರು ಜಮಾವಣೆಗೊಂಡು ತಮ್ಮ ಮೊಂಡು ಬೇಡಿಕೆಗಳನ್ನು ಈಡೇರಿಸಲು ಘೋಷಣೆಗಳನ್ನು ಕೂಗಿದರು.
ಭಾಷಾ ಅಲ್ಪಸಂಖ್ಯಾತರ ಆಯೋಗದ ಆದೇಶವನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ನಾವು ಇನ್ನೂ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಅಪರ್ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಎಇಎಸ್ ಮುಖಂಡ ಪ್ರವೀಣ ದಳವಿ ಇತರ ಮುಖಂಡರು ಇದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಎಸಿಪಿ ಭರಮಣಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು.



