ಸರಕಾರದ ಎರಡು ವರ್ಷಗಳ ಸಾಧನಾ ಸಂಭ್ರಮ
ಬೆಳಗಾವಿ: ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಆಯೋಜಿಸಲಾಗಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಮತ್ತು ಇತರೆ ಅಭಿವೃದ್ಧಿ ಕಾರ್ಯಗಳಿಗೆ ಸರಕಾರ ಸಾಕಷ್ಟು ಖರ್ಚು ಮಾಡಿದೆ. ಈ ಕುರಿತು ಜನರಿಗೆ ಮಾಹಿತಿಯನ್ನು ನೀಡುವ ಅಗತ್ಯವಿದೆ. ಪ್ರತಿ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಈ ಕೆಲಸವನ್ನು ಮಾಡಲಿದ್ದಾರೆ ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಮಾತನಾಡಿ, ಸರಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ ಈ ಸಂದರ್ಭದಲ್ಲಿ ಹಾಜರಿದ್ದರು.










