ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಗೆ ಎನ್‍ಹೆಚ್‍ಎಂ/ಎನ್‍ಬಿಡಿಸಿಪಿ ಕಾರ್ಯಕ್ರಮದಡಿಯಲ್ಲಿ ಹೊಸದಾಗಿ 01 ಹುದ್ದೆ ಕೀಟ ಸಂಗ್ರಾಹಕರನ್ನು ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕನಿಷ್ಠ ವಿದ್ಯಾರ್ಹತೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ತಮ್ಮ ಸ್ವ-ವಿವರಗಳೊಂದಿಗೆ ಸ್ವಯಂ ದೃಢೀಕರಣದೊಂದಿಗೆ ದಾಖಲಾತಿ ನಕಲು ಪ್ರತಿಗಳೊಂದಿಗೆ ಇದೇ ಜೂನ್ 10ರಂದು ಸಂಜೆ 4.30ರೊಳಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.
ಸ್ವ-ವಿವರದೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ದ್ವಿಚಕ್ರ ಚಾಲನಾ ಪರವಾನಿಗೆ ಪತ್ರದೊಂದಿಗೆ ಸಲ್ಲಿಸಬೇಕು.




