ಚಿತ್ರದುರ್ಗ: ಚಿತ್ರದುರ್ಗ ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿಗೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್(ರಾಷ್ಟ್ರೀಯ ತೋಟಗಾರಿಕೆ ಮಿಷನ್), ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳ ಅಡಿ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಹಾಗೂ ಅತಿ ಸಣ್ಣ, ಮಹಿಳಾ ಹಾಗೂ ಅಂಗವಿಕಲ ರೈತರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜೂ.20 ಕಡೆಯ ದಿನವಾಗಿದೆ.
ಯೋಜನೆಗಳ ಮಾರ್ಗಸೂಚಿ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಬಹುದು.




