ಬೆಂಗಳೂರು: ಆರ್ ಸಿಬಿ ತಂಡದ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಕೂಡ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
ಕಾಲ್ತುಳಿತ ನಡೆದ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಡಿಸಿಪಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಎಲ್ಲಾ ಮುಂಜಾಗ್ರತೆ ವಹಿಸಲಾಗುವುದು ಎಂದರು.
ರಾಜ್ಯದಲ್ಲಿ ಇನ್ನು ಮುಂದೆ ದೊಡ್ಡ ಪ್ರಮಾಣದ ಜನ ಸೇರುವ ವಿಜಯೋತ್ಸವ ಮತ್ತು ಇತರ ಸಮಾರಂಭಗಳ ಆಚರಣೆಗಾಗಿ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದರು.
ಘಟನೆ ಕುರಿತಂತೆ ಪೊಲೀಸರು ಪ್ರಾಥಮಿಕ ವರದಿ ನೀಡಿದ್ದಾರೆ. ಅದರ ಆಧಾರದಲ್ಲಿ ಕ್ರಮ ಜರುಗಿಸುವ ಕೆಲಸ ನಡೆಯಲಿದೆ. ಆದರೆ ಸಮಗ್ರ ತನಿಖೆಯ ನಂತರವಷ್ಟೇ ಈ ವಿವರಗಳನ್ನು ತಿಳಿಸಲಾಗುವುದು ಎಂದರು.
ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ ಆದೇಶಿಸಿದ್ದು, ಅದರ ಪ್ರಕ್ರಿಯೆ ಆರಂಭವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವ ಸ್ಥಳದಲ್ಲಿ ಕಾಲ್ತುಳಿತ ಆಗಿದೆ. ಅದನ್ನು ಯಾವ ರೀತಿಯಾಗಿ ತಪ್ಪಿಸಬಹುದಾಗಿತ್ತು ಎಂಬುದನ್ನು ತಿಳಿದುಕೊಳ್ಳಲು ಖುದ್ದಾಗಿ ನಾನೇ ಬಂದು ಪರಿಶೀಲಿಸಿದ್ದೇನೆ ಎಂದರು.
ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್ 6, 7, 2 ಮತ್ತು 2ಎ, 17, 18, 21, 16 ಇಷ್ಟು ಗೇಟ್‌ಗಳಲ್ಲಿ ಕಾಲ್ತುಳಿತ ಆಗಿದೆ. ಘಟನೆ ನಡೆದ ಸ್ಥಳದಲ್ಲಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ. ಆಸ್ಪತ್ರೆಗೆ ಕರೆದೊಯ್ಯುವಾಗ, ಕೆಲವರು ಮತ್ತು ಚಿಕಿತ್ಸೆ ವೇಳೆ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಯಾವ ಗೇಟ್‌ನಲ್ಲಿ ಎಷ್ಟು ಜನ ಸಾವನ್ನಪ್ಪಿದರು ಎಂಬ ಮಾಹಿತಿ ಇಲ್ಲ ಎಂದರು.
ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಘಟನೆಗಳು ಆಗಬಾರದು ಎಂಬ ವಿಚಾರದಲ್ಲಿ ಗೃಹ ಇಲಾಖೆಯಿಂದ ಒಂದು ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ. ಇನ್ನುಮುಂದೆ ಯಾವುದೇ ದೊಡ್ಡ ಸಮಾರಂಭ, ಸಭೆ, ವಿಜಯೋತ್ಸವ ನಡೆಯುವಾಗ ಪೊಲೀಸ್ ಇಲಾಖೆಯ ನಿರ್ದೇಶನ ಏನು ಬರುತ್ತದೆ, ಅದರ ಚೌಕಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕು ಎಂದರು.
ಹೊಸ ಮಾರ್ಗ ಸೂಚಿಗಳನ್ನು ಮಾಡುತ್ತೇವೆ. ಇದರ ಮೂಲಕ ಕಾರ್ಯಕ್ರಮ ಆಯೋಜಕರಿಗೆ ಕೆಲವು ಸೂಚನೆಗಳನ್ನು ಕೊಡುತ್ತೇವೆ. ಯಾವತ್ತು ಕೂಡ ಇಂತಹ ಘಟನೆಗಳಾಗಬಾರದು. ಅಮಾಯಕರ ಸಾವುಗಳು ಆಗಬಾರದು. ಇದೆಲ್ಲವನ್ನು ನೋಡಿದಾಗ ನೋವಾಗುತ್ತದೆ. ನಿನ್ನೆ ಶವಗಾರದಲ್ಲಿ ನೋಡಿದಾಗ ದುಃಖವಾಯಿತು. 20-25 ವರ್ಷ ವಯಸ್ಸಿನವರು ಸಂತೋಷದಿಂದ ಆಚರಣೆಗೆ ಬಂದಾಗ ಜೀವವನ್ನೇ ಕಳೆದುಕೊಂಡಿದ್ದಾರೆ. ಇದೆಲ್ಲವನ್ನು ಯಾರು ಊಹೆ ಮಾಡಿರಲಿಲ್ಲ ಎಂದರು.
ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ಘಟನೆ ನಡೆದಿರಲಿಲ್ಲ. ದುರಂತದಿಂದ ಬಹಳ ದು:ಖವಾಗಿದೆ. ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದಾರೆ. 56 ಜನರು ಗಾಯಗೊಂಡಿದ್ದಾರೆ. 46 ಗಾಯಾಳುಗಳು ಡಿಸ್ಚಾರ್ಜ್ ಆಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.




