ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿವಾರು ಜನಗಣತಿ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಾಜ್ಯದ ಪ್ರಭಾವಿ ಸಮುದಾಯಗಳ ಒತ್ತಡಕ್ಕೆ ಮಣಿದ ಹೈಕಮಾಂಡ್ ನೀಡಿದ ಸೂಚನೆ ಆಧರಿಸಿ ರಾಜ್ಯ ಸರ್ಕಾರ ಇದೀಗ ಹೊಸ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ಹಿಂದೆ ಸಮೀಕ್ಷೆ ನಡೆಸಿದ ಕಾಂತರಾಜು ನೇತೃತ್ವದ ಆಯೋಗದ ವರದಿಯ ದತ್ತಾಂಶಗಳನ್ನು ಆಧರಿಸಿ, ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ನೀಡಿದ್ದ ವರದಿ ಅನುಷ್ಠಾನ ಕುರಿತಂತೆ ಚರ್ಚಿಸಲು ನಡೆದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಹೊಸದಾಗಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಾಯಿದೆಯ ಅನುಸಾರ ಪ್ರತಿ 10 ವರ್ಷಗಳಿಗೊಮ್ಮೆ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಬೇಕು. ಅದರಂತೆ ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇದೀಗ ಹೊಸದಾಗಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ, ಕಳೆದ 2015 ರಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು 54 ಮಾನದಂಡಗಳನ್ನು ಇಟ್ಟುಕೊಂಡು ಕೈಗೊಂಡು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿತ್ತು. ಅದರ ದತ್ತಾಂಶಗಳನ್ನು ಆಧರಿಸಿ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಕಳೆದ ಫೆಬ್ರವರಿ 2024ರಲ್ಲಿ ವರದಿ ನೀಡಿತ್ತು. ಆದರೆ ಆ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ವರದಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಲಿಲ್ಲ. ಈಗ ಈ ವರದಿ ಸಲ್ಲಿಸಿ ಹತ್ತು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಬರಲಾಗಿದೆ ಎಂದರು.
2011 ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನರಿದ್ದರು. ಈ ಜನಸಂಖ್ಯೆ 2015 ರ ವೇಳೆಗೆ 6.35 ಕೋಟಿ ಎಂದು ಅಂದಾಜಿಸಲಾಗಿದೆ. 5.98 ಕೋಟಿ ಜನ ಸಮೀಕ್ಷೆಗೆ ಒಳಪಟ್ಟಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದ್ದು 11.4.2015 ರಂದು ಹಾಗೂ 30-5-2015 ರಂದು ಮುಕ್ತಾಯವಾಗಿದೆ. 1.60 ಲಕ್ಷ ಸಿಬ್ಬಂದಿ ಹಾಗೂ 1.33 ಲಕ್ಷ ಉಪಾಧ್ಯಾಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು ಎಂದರು.
ಹಿಂದೆ 2013-2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಮತ್ತು ಅದರ ಶಿಫಾರಸ್ಸುಗಳು ಅಂತಿಮಗೊಂಡಿರಲಿಲ್ಲ. 2018ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾದರು. ಪುಟ್ಟರಂಗಶೆಟ್ಟರು ಹಿಂದುಳಿದ ವರ್ಗಗಳ ಸಚಿವರಾದರು. ಆ ವೇಳೆಗೆ ವರದಿ ಪೂರ್ಣಗೊಂಡಿತ್ತು. ಅಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜು ಹಾಗೂ ಸದಸ್ಯರು ಸಚಿವ ಪುಟ್ಟರಂಗಶೆಟ್ಟರನ್ನು ಭೇಟಿ ಮಾಡಿ ವರದಿ ಪಡೆಯಬೇಕು ಎಂದು ಕೋರಿದಾಗ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಒತ್ತಡ ಹಾಕಿ ವರದಿಯನ್ನು ಪಡೆಯಬಾರದು ಎಂದದ್ದರಿಂದ ಅವರು ವರದಿ ಪಡೆಯಲಿಲ್ಲ ಎಂದರು.
ಕಾಂತರಾಜು ಅವರ ಅವಧಿ ಮುಗಿದ ನಂತರ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತು. ಸದಸ್ಯರೂ ಕೂಡ ಬಿಜೆಪಿಯವರೇ ಆಗಿದ್ದರು. ಜಯಪ್ರಕಾಶ್ ಹೆಗಡೆಯವರು ಸಮೀಕ್ಷೆಯ ದತ್ತಾಂಶಗಳ ಆಧಾರದ ಮೇಲೆ ಶಿಫಾರಸ್ಸು ಮಾಡಿದರು. ಶಿಫಾರಸ್ಸುಗಳನ್ನು 29-2-2024 ರಂದು ಸರ್ಕಾರಕ್ಕೆ ಸಲ್ಲಿಸಿದರು. ಕಾಂತರಾಜು ಅವರು ಕೂಡ ಈ ಸಂದರ್ಭದಲ್ಲಿ ಇದ್ದರು ಎಂದರು.
ಲೋಕಸಭಾ ಚುನಾವಣೆ ಬಂದಿದ್ದರಿಂದ ವರದಿ ಬಗ್ಗೆ ಚರ್ಚೆ ಮಾಡಲಾಗಲಿಲ್ಲ. ನಂತರ ನಮ್ಮ ಸರ್ಕಾರ ವರದಿಯನ್ನು ಪಡೆದು 2025 ರಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವ ಸಂಪುಟದಲ್ಲಿ ಮಂತ್ರಿ ಮಂಡಲದ ಸದಸ್ಯರು ಅಭಿಪ್ರಾಯಗಳನ್ನು ನೀಡಿದ್ದಾರೆ. ಅಂತಿಮವಾಗಿ ಇಂದು ವರದಿಯ ಬಗ್ಗೆ ಚರ್ಚೆ ಮಾಡಿದೆ ಎಂದರು.
ಪಕ್ಷದ ವರಿಷ್ಠರು ನನ್ನನ್ನು ಮತ್ತು ಉಪಮುಖ್ಯಮಂತ್ರಿಗಳನ್ನು ಕರೆದು ವರದಿ ಹತ್ತು ವರ್ಷಗಳಷ್ಟು ಹಳೆಯದಾಗಿದ್ದು, ಕಾನೂನು ಪ್ರಕಾರ ಅನೇಕ ಬದಲಾವಣೆಗಳು ಮತ್ತು ಬೆಳವಣಿಗೆಗಳು ಆಗಿರುತ್ತವೆ ಎಂದು ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತಿದ್ದುಪಡಿ ವಿಧೇಯಕ (2014) ಸೆಕ್ಷನ್ 11 ಕಲಂ (1) ರಂತೆ ರಾಜ್ಯ ಸರ್ಕಾರ ಯಾವುದೇ ಸಮಯದಲ್ಲಿ ಈ ಅಧಿನಿಯಮ ಜಾರಿಗೆ ಬಂದ ದಿನಾಂಕದಿಂದ 10 ವರ್ಷಗಳ ಅವಧಿ ಮುಕ್ತಾಯವಾದಾಗ, ಮತ್ತು ಅದರ ನಂತರ ಬರುವ ಪ್ರತಿ 10 ವರ್ಷಗಳು ಮುಕ್ತಾಯವಾಗುವಾಗ ಹಿಂದುಳಿದ ವರ್ಗವಾಗಿ ಉಳಿಯದೇ ಹೋಗಿರುವ ವರ್ಗಗಳನ್ನು ಪಟ್ಟಿಯನ್ನು ತೆಗೆದುಹಾಕುವುದು ಅಥವಾ ಹೊಸ ಹಿಂದುಳಿದ ವರ್ಗಗಳನ್ನು ಪಟ್ಟಿಗೆ ಸೇರಿಸುವದು ಎಂದು ಸ್ಪಷ್ಟವಾಗಿ ಹೇಳಿದೆ. ಕಲಂ 2 ರಲ್ಲಿ ಹೇಳಿದಂತೆ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯಕ್ ಅವರ ಸಲಹೆಯನ್ನೂ ಪಡೆಯಲಾಗುವುದು ಎಂದರು.




