ಕ್ಷಿಪ್ರ ಮತ್ತು ಅಗ್ಗದ ಪ್ರಯಾಣದ ಹಿನ್ನೆಲೆಯಲ್ಲಿ ಜನಪ್ರಿಯವಾಗಿದ್ದ ಬೈಕ್ ಟ್ಯಾಕ್ಸಿಗಳು
ಆಟೋ ಚಾಲಕರು ದೊಡ್ಡ ಮಟ್ಟದಲ್ಲಿ ಧ್ವನಿ
ಸಿದ್ದರಾಮಯ್ಯ, ರಾಹುಲ್ ಗಾಂಧಿಯವರಿಗೆ ಪುನರಾರಂಭಕ್ಕೆ ಮನವಿ
ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಮುಂದೆ ಬೈಕ್ ಟ್ಯಾಕ್ಸಿಗಳು ಲಭ್ಯ ಇರುವುದಿಲ್ಲ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕ್ಷಿಪ್ರ ಮತ್ತು ಅಗ್ಗದ ಪ್ರಯಾಣದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳು ಜನಪ್ರಿಯವಾಗಿದ್ದವು. ಇದರ ವಿರುದ್ಧ ಆಟೋ ಚಾಲಕರು ದೊಡ್ಡ ಮಟ್ಟದಲ್ಲಿ ಧ್ವನಿಯೆತ್ತಿದ್ದರು. ಅಲ್ಲದೆ ಕೆಲವು ಕಡೆ ಬೈಕ್ ಟ್ಯಾಕ್ಸಿ ಸವಾರರಿಂದ ಕಾನೂನು ಉಲ್ಲಂಘನೆ ಪ್ರಕರಣಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧಿಸಿ ಆದೇಶ ಹೊರಡಿಸಿತ್ತು.
ಈ ಆದೇಶ ಪ್ರಶ್ನಿಸಿ ರಾಪಿಡೋ ಸೇರಿದಂತೆ ಹಲವು ಬೈಕ್ ಟ್ಯಾಕ್ಸಿ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋಗಿದ್ದವು. ಹೈಕೋರ್ಟ್ ನ ಏಕ ಸದಸ್ಯ ಪೀಠ ರಾಜ್ಯ ಸರ್ಕಾರದ ವಾದವನ್ನು ಪುರಸ್ಕರಿಸಿತ್ತು. ಇದರ ನಂತರ ಬೈಕ್ ಟ್ಯಾಕ್ಸಿ ಸಂಸ್ಥೆಗಳು ಮೇಲ್ಮನವಿ ಸಲ್ಲಿಸಿದ್ಧವು. ಇದು ಕೂಡ ವಜಾಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧ ಜಾರಿಗೆ ಬಂದಿದೆ.
ಜೂನ್ 16ರ ಸೋಮವಾರದಿಂದ ರಾಜ್ಯದೆಲ್ಲೆಡೆ ರಸ್ತೆಗಿಳಿಯುವ ಬೈಕ್ ಟ್ಯಾಕ್ಸಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸತೊಡಗಿದ್ದಾರೆ. ಇದರ ನಡುವೆ ರಾಪಿಡೋ ಸಂಸ್ಥೆ ಬೆಂಗಳೂರು ರಾಜ್ಯದಲ್ಲಿ ನೀಡಲಾಗುತ್ತಿದ್ದ ಬೈಕ್ ಟ್ಯಾಕ್ಸಿ ಸೇವೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದೆ.
ಪ್ರಸ್ತುತ ನಡೆಯುತ್ತಿರುವ ಈ ಪ್ರಕರಣದಲ್ಲಿ ನಾವು ನೇರ ಪಕ್ಷಗಾರರಲ್ಲದಿದ್ದರೂ, ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಪಾಲುದಾರರಾಗಿ ನಾವು ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಇದು ನಮ್ಮ ಕ್ಯಾಪ್ಟನ್ಗಳಿಗೆ ಸವಾಲಿನ ಸಮಯವಾಗಿದೆ. ಅವರಲ್ಲಿ ಅನೇಕರು ಬೈಕ್ ಟ್ಯಾಕ್ಸಿಗಳನ್ನು ತಮ್ಮ ಪ್ರಮುಖ ಆದಾಯದ ಮೂಲವಾಗಿ ಅವಲಂಬಿಸಿದ್ದಾರೆ ಎಂದಿದೆ.
ಕರ್ನಾಟಕದಾದ್ಯಂತ ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕುವ, ಕೊನೆಯ ಮೈಲಿ ಸಂಪರ್ಕವನ್ನು ಒದಗಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಆದರೆ ಕೋರ್ಟ್ ಆದೇಶ ಗೌರವಿಸಿ ನಾವು ಸೇವೆಯಿಂದ ಹಿಂದೆ ಸರಿಯುತ್ತಿದ್ದೇವೆ ಎಂದು ತಿಳಿಸಿದೆ.
ನಮ್ಮ ಬೈಕ್ ಕ್ಯಾಪ್ಟನ್ ಗಳು ಈ ಬೆಳವಣಿಗೆಯಿಂದ ಅಧೀರಾಗುವುದು ಬೇಡ. ಸದ್ಯದಲ್ಲಿಯೇ ಹೊಸ ವ್ಯವಸ್ಥೆಯೊಂದಿಗೆ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದೆ.
ಮತ್ತೊಂದೆಡೆ ಬೈಕ್ ಟ್ಯಾಕ್ಸಿ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದ ಬೈಕ್ ಸವಾರರು ಸಿಎಂ ಸಿದ್ದರಾಮಯ್ಯ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಹಲವರು ಬೈಕ್ ಟ್ಯಾಕ್ಸಿ ಸೇವೆ ಬಳಸುತ್ತಿದ್ದಾರೆ. ವಿದ್ಯಾರ್ಥಿಗಳು, ದಿನಗೂಲಿ ನೌಕರರು ಸೇರಿದಂತೆ ಅನೇಕರು ತಮಗೆ ಉದ್ಯೋಗ ಸಿಗದಿದ್ದಾಗ ಅಥವಾ ತಮ್ಮ ಬಿಡುವಿನ ಸಮಯದಲ್ಲಿ ಬೈಕ್ ಟ್ಯಾಕ್ಸಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಬೈಕ್ ಟ್ಯಾಕ್ಸಿಗಳಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ.
ಇನ್ನು ಬೈಕ್ ಟ್ಯಾಕ್ಸಿ ಬಳಕೆದಾರರ ಸಂಖ್ಯೆಯೂ ಹೆಚ್ಚಾಗಿದೆ. ಬಸ್, ಆಟೋ ಸೇವೆಗಳು ವಿರಳವಾಗಿರುವ ಅನೇಕ ಸ್ಥಳಗಳಲ್ಲಿ ಬೈಕ್ ಟ್ಯಾಕ್ಸಿ ಕಂಪನಿಗಳು ಸೇವೆ ಒದಗಿಸುತ್ತಿವೆ. ಆಟೋ, ಟ್ಯಾಕ್ಸಿಗಳಲ್ಲಿ ವಿಧಿಸುವ ಶುಲ್ಕಗಳಿಗಿಂತಲೂ ತುಸು ಕಡಿಮೆ ಹಾಗೂ ತ್ವರಿತವೆಂದು ಬೈಕ್ ಟ್ಯಾಕ್ಸಿ ಸೇವೆಯನ್ನ ಆಯ್ಕೆ ಮಾಡುವವರ ಸಂಖ್ಯೆ ಅಧಿಕವಾಗಿದೆ. ಈಗ ಬೈಕ್ ಟ್ಯಾಕ್ಸಿಗಳ ಸ್ಥಗಿತದಿಂದ ಅವರೆಲ್ಲರೂ ಸಹ ಸಂಕಷ್ಟಕ್ಕೆ ಸಿಲುಕಲಿದ್ದು ಇವರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದ್ದಾರೆ.




