ಜೂನ್ 23ರಂದು ಕರಾವಳಿಯ ಮತೀಯ ದ್ವೇಷದ ಕೊಲೆಗಳ ಸಮಗ್ರ ತನಿಖೆಗೆ ಒತ್ತಾಯಿಸಿ
ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ನೀಡಲು ಆಗ್ರಹಿಸಿ ಸಿಪಿಐಎಂ ನಿಂದ ಪ್ರತಿಭಟನೆ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕೋಮುವಾದಿ ಚಟುವಟಿಕೆಗಳ ನಿಗ್ರಹಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕುಡುಪು ಮಾಬ್ ಲಿಂಚಿಂಗ್ ಪ್ರಕರಣವನ್ನು ಹೊಸ ಎಫ್ಐಆರ್ ದಾಖಲಿಸಿ ಮರು ತನಿಖೆ ನಡೆಸುವಂತೆ ಹಾಗೂ ಈ ಅವಧಿಯಲ್ಲಿ ಮತೀಯ ದ್ವೇಷದಿಂದ ಕೊಲೆಗೀಡಾದವರ ಕುಟುಂಬಳಿಗೆ ಸೂಕ್ತ ಪರಿಹಾರ ಧನ ಒದಗಿಸಲು, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ ನಡೆದಿರುವ ಮತೀಯ ದ್ವೇಷದ ಕೊಲೆ, ಪ್ರತೀಕಾರದ ಕೊಲೆಗಳನ್ನು ವಿಶೇಷ ತನಿಖಾ ತಂಡದ ಮೂಲಕ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.
ಕಳೆದ ಮೂರು ದಶಕದ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ ಇಂತಹ ಸರಣಿ ಕೊಲೆಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಸಿಪಿಐಂ ದ.ಕ. ಜಿಲ್ಲಾ ಸಮಿತಿ ಜೂನ್ 23 ರಂದು ಸಂಜೆ 4:30 ಕ್ಕೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದೆ.

ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ. ಕೆ ಪ್ರಕಾಶ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ಪ್ರಕಟಣೆ ತಿಳಿಸಿದೆ.




