ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಸೋದರ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಹಾಗೂ ಕೆಎಂಎಫ್ ನ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಳಗಾವಿ ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ತೆರೆಮರೆಯಲ್ಲಿ ನಡೆದ ರಾಜಕೀಯ ತಂತ್ರಗಾರಿಕೆ ಮತ್ತು ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶಿಸುವಿಕೆ ಮೂಲಕ ಬಿಕ್ಕಟ್ಟು ಬಗೆಹರಿದಿದ್ದು ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಚುನಾವಣೆಯ ಅಖಾಡದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ.
ಸದ್ಯ ಎಲ್ಲಾ ಜಿಲ್ಲೆಗಳ ಹಾಲು ಒಕ್ಕೂಟಗಳ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಸರ್ಕಾರ ಕೂಡ ಕೆಲವರನ್ನು ನಾಮನಿರ್ದೇಶನ ಮಾಡಿದ್ದು, ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ ಕೆ ಸುರೇಶ್ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದೆ.




