ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಅಸಮಾಧಾನದ ಬೇಗುದಿ ತೀವ್ರಗೊಂಡಿದ್ದು, ಯಾವುದೇ ಕ್ಷಣದಲ್ಲಿ ಇದು ಸ್ಫೋಟಗೊಂಡು ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ನಾವು ಆಪರೇಷನ್ ಕಮಲ ಮಾಡಲ್ಲ. ಆದರೆ, ಹತಾಶ ಕಾಂಗ್ರೆಸ್ ಶಾಸಕರು ತಾವಾಗಿಯೇ ಬಿಜೆಪಿ ಸೇರಲಿದ್ದಾರೆ ಎಂದರು.
ಕಾಂಗ್ರೆಸಿನ ಯಾವುದೇ ಶಾಸಕರನ್ನು ನಾವು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಅವರೇ ಬರ್ತಾರೆ ಇದಕ್ಕೆ ಆಪರೇಷನ್ ಕಮಲ ಅಂತಾರೆ ಎಂದರು.
ಸರ್ಕಾರದ ಕಾರ್ಯವೈಖರಿಯ ಬಗ್ಗೆ ಕೇವಲ ರಾಜು ಕಾಗೆ ಮತ್ತು ಬಿ ಆರ್ ಪಾಟೀಲ್ ಮಾತ್ರವಲ್ಲ ಅನೇಕರು ಅಸಮಾಧಾನಗೊಂಡಿದ್ದಾರೆ. ಅವರೆಲ್ಲರೂ ಸದ್ಯದಲ್ಲಿಯೇ ತಮ್ಮ ಅಸಮಾಧಾನ ಬಹಿರಂಗಪಡಿಸಲಿದ್ದಾರೆ. ಕಾದುನೋಡಿ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಮಾತನಾಡಿದ ಆರೋಪದ ಮೇಲೆ ಇನ್ಫೋಸಿಸ್ನ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಮೇಲೆ ಕೇಸ್ ಹಾಕಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ರೀತಿ ತುರ್ತು ಪರಿಸ್ಥಿತಿ ತರುವ ರೀತಿ ಮಾಡುತ್ತಿದ್ದಾರೆ. ಇದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.




