ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್ -2025
ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು
ಬೆಳಗಾವಿ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ನಗರದ ಕೋಟೆ ಆವರಣದಲ್ಲಿ “ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಫೀಬಾ ಏಷ್ಯಾ ಅಧ್ಯಕ್ಷ ಡಾ. ಕೆ. ಗೋವಿಂದರಾಜ್ ರಾಜು ಚಾಲನೆ ನೀಡಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ವೇಳೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಒಲಂಪಿಕ್ ಡೇ ಅಂಗವಾಗಿ ವಿಶ್ವದಾದ್ಯಂತ ಓಟವನ್ನು ಆಯೋಜಿಸಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಓಟದಲ್ಲಿ ಸಾರ್ವಜನಿಕರು, ಪೊಲೀಸ್ ಇಲಾಖೆಯ ಸಿಬ್ಬಂದಿಗ, ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸದ ವಿಷಯ ಎಂದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ಆಚರಿಸುವ ಮೂಲಕ ಪ್ರತಿಯೊಬ್ಬರು ಕ್ರೀಡಾ ಸ್ಪೂರ್ತಿ ಜೊತೆಗೆ ನಾಯಕತ್ವ ಗುಣ ಬೆಳಸಿಕೊಳ್ಳಬೇಕು ಎಂದರು.
“ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ್ಯಾಲಿ ಕೋಟೆ ಆವರಣದಿಂದ ಆರಂಭಗೊಂಡು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಕೃಷ್ಣ ದೇವರಾಯ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ತಲುಪಿತು.
ಒಲಿಂಪಿಕ್ ಡೇ ಓಟದಲ್ಲಿ ವಿವಿಧ ಶಾಲೆ/ಕಾಲೇಜು/ವಸತಿ ನಿಲಯ/ವಿಶ್ವವಿದ್ಯಾಲಯಗಳಿಂದ ಸುಮಾರು 3500 ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಮಹಾಕಾರ್ಯದರ್ಶಿ ಟಿ. ಅನಂತರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಯುವ ಮುಖಂಡರಾದ ಸರ್ವೋತ್ತಮ ಜಾರಕಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




