ಬೆಂಗಳೂರು: ಬರುವ ಆಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕಾಂಗ್ರೆಸ್ ನಲ್ಲಿ ಅಂತಹ ಯಾವುದೇ ಬದಲಾವಣೆಗಳು ಆಗುವುದು ಇಲ್ಲ. ರಾಜಣ್ಣ ಅವರ ಹೇಳಿಕೆ ಯಾವುದೇ ಮಹತ್ವ ನೀಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಗೃಹಸಚಿವ ಜಿ ಪರಮೇಶ್ವರ್, ಬದಲಾವಣೆ ನಿಶ್ಚಿತ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದಕ್ಕೆ ಯಾವುದೇ ಮಹತ್ವ ಕೊಡಬೇಕಾದ ಅಗತ್ಯವಿಲ್ಲ ಅಂತ ಯಾವುದೇ ಬದಲಾವಣೆಗಳು ಕೂಡ ನಡೆಯುವುದಿಲ್ಲ. ರಾಜ್ಯದಲ್ಲಿ ಯಾವುದೇ ಪವರ್ ಸೆಂಟರ್ ಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜಣ್ಣ ಅವರ ಹೇಳಿಕೆಯನ್ನು ವಿಶ್ಲೇಷಣೆ ಮಾಡಲು ತಾವು ಪತ್ರಕರ್ತ ಅಲ್ಲ ಹಾಗೂ ಅದಕ್ಕೆ ತಮಗೆ ಸಮಯವೂ ಇಲ್ಲ. ಹೀಗಾಗಿ ಈ ಹೇಳಿಕೆಯನ್ನು ನಿರ್ಲಕ್ಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಆದರೆ ಮತ್ತೊಂದೆಡೆ ಪ್ರತಿಕ್ರಿಯೆ ನೀಡಿರುವ ಜಿ ಪರಮೇಶ್ವರ್, ಸಹಕಾರ ಸಚಿವ ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆ ಗೊತ್ತಿಲ್ಲ. ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ. ಯಾವ ಕ್ರಾಂತಿ ಅನ್ನೋದನ್ನು ಅವರನ್ನೇ ಕೇಳಿ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ. ಇರೋದು ಒಂದೇ ಪವರ್ ಸೆಂಟರ್. ಆಡಳಿತದ ದೃಷ್ಟಿಯಿಂದ ಸಿಎಂ ಪವರ್ ಸೆಂಟರ್. ಪಕ್ಷದ ಅಧ್ಯಕ್ಷರು, ಉಸ್ತುವಾರಿಗಳೂ ಪವರ್ ಸೆಂಟರ್ಗಳೇ. ಎಲ್ಲಕ್ಕಿಂತ ಮಿಗಿಲಾಗಿ ಹೈಕಮಾಂಡ್ ಇದೆ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.
ಮಂತ್ರಿಗಳ ಬದಲಾವಣೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗಿರುವ ಮಾಹಿತಿ ಪ್ರಕಾರ ಹೇಳಿರಬಹುದು. ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ತಿಳಿದಂತೆ ಯಾವುದೇ ಬದಲಾವಣೆ ಆಗಲ್ಲ. ಮುಂದೇನಾಗುತ್ತೆ ಅಂತ ಹೇಗೆ ಹೇಳಲು ಸಾಧ್ಯ?. ಮುಂದೇನು ಅಂತ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷ ಮತ್ತು ಆಡಳಿತದಲ್ಲಿ ಯಾವುದೇ ಗ್ರಿಪ್ ಕಳೆದುಕೊಂಡಿಲ್ಲ. ಸಿಎಂ ಈಗ ಆಡಳಿತ ನಡೆಸ್ತಾ ಇಲ್ವಾ? ಸಣ್ಣಪುಟ್ಟ ವಿಚಾರಗಳಿರುತ್ತವೆ, ಬಗೆಹರಿಸುತ್ತಾರೆ. ಬಿಜೆಪಿಯವರು ಹಿಂದೆಯೂ ಟೀಕೆ ಮಾಡುತ್ತಿದ್ದರು. ಈಗಲೂ ಮಾಡುತ್ತಾನೆ ಇದ್ದಾರೆ. ಸಿಎಂ ಅವರಿಗೆ ಸ್ವಲ್ಪ ವಯಸ್ಸಾಗಿರಬಹುದು. ಹಾಗಾಗಿ ಅವರು ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ ಎಂದರು.
ಸಿಎಂ ಬದಲಾಗುತ್ತಾರೆ: ಇನ್ನೊಂದೆಡೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾಗುವುದಿಲ್ಲ. ಆದರೆ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರ ಕಾರ್ಯ ಶೈಲಿ ಬದಲಾಗುತ್ತದೆ ಎಂದು ಹೇಳಿದ್ದಾರೆ.
ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಪ್ರದರ್ಶಿಸಿದ ಗಟ್ಟಿತನ ಈಗ ಪ್ರದರ್ಶಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದನ್ನು ನಾವು ಅವರ ಗಮನಕ್ಕೆ ತಂದಿದ್ದು ಸದ್ಯದಲ್ಲಿ ಅವರು ಬದಲಾಗಲಿದ್ದಾರೆ ಎಂದು ಹೇಳಿದರು.
ನಾವುಗಳೆಲ್ಲ ಒಟ್ಟಾಗಿ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯ ಶೈಲಿ ಬದಲಾಯಿಸಲು ಪ್ರಯತ್ನಿಸುತ್ತೇವೆ ಆದರೆ ಯಾವುದೇ ಕಾರಣಕ್ಕೂ ಹುದ್ದೆ ಬದಲಾಗುವುದಿಲ್ಲ. ಉಳಿದಿರುವ ಎರಡು ವರ್ಷ 11 ತಿಂಗಳು ಅವಧಿಯನ್ನು ಅವರೇ ಪೂರ್ಣಗೊಳಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.



