ಬೆಂಗಳೂರು: ವಸತಿ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸುವ ಮೂಲಕ ಕೋಲಾಹಲ ಸೃಷ್ಟಿಸಿದ ಹಿರಿಯ ಶಾಸಕ ಹಾಗೂ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಭೇಟಿ ಮಾಡಿ ಸುದೀರ್ಘ ಒಂದು ಗಂಟೆ ಕಾಲ ಮಾತನಾಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುರ್ಜೇವಾಲಾ ಜೊತೆ ಮಾತುಕತೆ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ನಾಯಕರು ಕರೆದಿದ್ದರು. ಸುರ್ಜೇವಾಲಾ ಅವರ ಜೊತೆ ದೀರ್ಘ ಚರ್ಚೆಯಾಗಿದೆ. ನಾನು ಹೇಳಬೇಕಾದದ್ದನ್ನು ಹೇಳಿದ್ದೇನೆ. ಅವರು ಎಲ್ಲ ವಿಚಾರಗಳನ್ನು ನೋಟ್ ಮಾಡಿಕೊಂಡಿದ್ದಾರೆ. ಮುಂದಿನ ತೀರ್ಮಾನ ಅವರಿಗೆ ಬಿಟ್ಟಿದ್ದು ಎಂದರು.




