ಯಾರೂ ಏನೂ ಹೇಳಿದರೂ ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ

11 months ago

ಮೈಸೂರು: ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಚಾರಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಂಬಂಧ ಬಂಡೆಯಂತೆ ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.

ತಮ್ಮ ಜೊತೆಯಲ್ಲಿದ್ದ ಡಿ ಕೆ ಶಿವಕುಮಾರ್ ಅವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ  ಒಟ್ಟಾಗಿದ್ದೇವೆ ಎಂದರು.

ಯಾರೂ ಏನೂ ಹೇಳಿದರೂ ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅದನ್ನು ಕೇಳುವುದೂ ಇಲ್ಲ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದರು.

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು  ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದರು.

ಸುರ್ಜೇವಾಲಾ ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.

Leave a Reply