ಬೆಂಗಳೂರು: ರಾಜ್ಯದಲ್ಲಿ ಕಳೆದ ಐದೂವರೆ ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅರಣ್ಯ, ಸಚಿವ ಈಶ್ವರ ಖಂಡ್ರೆ ಈ ಎಲ್ಲ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸಚಿವರು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವನ್ನಪ್ಪಿವೆ? ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ? ಅಸಹಜವಾಗಿ ಮೃತಪಟ್ಟ ಹುಲಿಗಳ ಸಾವಿಗೆ ಕಾರಣವೇನು? ಎಂಬ ಬಗ್ಗೆ ತನಿಖೆ ನಡೆದು ವರದಿ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಮೃತಪಟ್ಟ ಯಾವುದಾದರೂ ಹುಲಿಗಳ ಅಂಗಾಂಗ ಅಂದರೆ ಉಗುರು, ಹಲ್ಲು ಇತ್ಯಾದಿ ತೆಗೆಯಲಾಗಿತ್ತೆ? ಹುಲಿಗಳ ಹತ್ಯೆ ಆಗಿದ್ದಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಆಗಿದೆಯೇ? ಎಷ್ಟು ಹುಲಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ? ಎಂಬ ವಿವರ ನೀಡುವಂತೆ ಸೂಚಿಸಿದ್ದಾರೆ
ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ? ಎಷ್ಟು ಪ್ರಕರಣಗಳು ತನಿಖಾ ಹಂತದಲ್ಲಿದೆ, ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎಂಬ ಸಂಪೂರ್ಣ ವಿವರವನ್ನು 10 ದಿನಗಳ ಒಳಗಾಗಿ ತಮಗೆ ಸಲ್ಲಿಸಲು ಹೇಳಿದ್ದಾರೆ.
ಮಲೆ ಮಹದೇಶ್ವರ ಕಾನನ ಪ್ರದೇಶದ ಹೂಗ್ಯಂನಲ್ಲಿ 5 ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿವೆ ಎನ್ನಲಾದ ಪ್ರಕರಣಕ್ಕೆ ಕೆಲವು ದಿನಗಳ ಮೊದಲು ಕೌದಳ್ಳಿ ವಲಯ, ರಾಮಾಪುರ -ಮಾರ್ಟಳ್ಳಿ ಗಡಿಯಲ್ಲಿ ಚಿರತೆಯೊಂದರ ಹತ್ಯೆ ಆಗಿತ್ತು ಮತ್ತು ಮೃತ ಚಿರತೆಯ ಕಾಲುಗಳನ್ನು ಕತ್ತರಿಸಲಾಗಿತ್ತು ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಕುರಿತಂತೆಯೂ ಎಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶಿಸಿದ್ದಾರೆ.
ಚಿರತೆಯ ಅಂಗಾಂಗ ಕತ್ತರಿಸಿರುವುದು ನಿಜವಾಗಿದ್ದಲ್ಲಿ ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕೈಗೊಳ್ಳಬೇಕಾದ ಕ್ರಮದ ಶಿಫಾರಸಿನೊಂದಿಗೆ 7 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸಚಿವರು ಸೂಚನೆ ನೀಡಿದ್ದಾರೆ.




