ಬೆಂಗಳೂರು: ಶಾಸಕರು ಅಸಮಾಧಾನ ಹೊಂದಿದ್ದಾರೆ ಎಂಬ ನೆಪದಲ್ಲಿ ಸುರ್ಜೇವಾಲ ರಾಜ್ಯಕ್ಕೆ ಭೇಟಿನೀಡಿ ಅಭಿಪ್ರಾಯ ಸಂಗ್ರಹಿಸಿರುವುದು ತರವಲ್ಲ. ಅವರು ಬಂದು ನಡೆಸಿದ ಪ್ರಕ್ರಿಯೆ ಬಗ್ಗೆ ನನಗೆ ಸಮಾಧಾನವಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜೆವಾಲಾ ಅವರ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಕೆ ಎನ್ ರಾಜಣ್ಣ, ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಅವರು ನಡೆದುಕೊಳ್ಳುತ್ತಿರುವ ರೀತಿ ತಮಗೆ ಸಮಾಧಾನ ತಂದಿಲ್ಲ ಎಂದಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಯಂತಿ ನಟರಾಜನ್ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ಒಂದೇ ದಿನಕ್ಕೆ ವಾಪಸ್ ಹೋಗಿದ್ದಾರೆ. ಆದರೆ ರಾಜ್ಯದಲ್ಲಿ ಏನಾಗಿದೆ ನೋಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ಹೈಕಮಾಂಡ್, ಇಲ್ಲವೆ ಶಾಸಕರು ಬದಲಾವಣೆ ಮಾಡಬೇಕು. ಶಾಸಕರು ಬದಲಾಯಿಸಲು ತಯಾರಿಲ್ಲ. ಹೈಕಮಾಂಡ್ ಸಹ ಬದಲಾವಣೆ ಮಾಡುವುದಿಲ್ಲ ಅಂದುಕೊಂಡಿದ್ದೇನೆ ಎಂದರು.
ದೇಶದಲ್ಲಿ ಹಿಂದುಳಿದ ವರ್ಗಗಳನ್ನು ಸಂಘಟಿಸುವ ದೃಷ್ಟಿಯಿಂದ ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿ ನಾಯಕತ್ವವನ್ನು ಸಿದ್ದರಾಮಯ್ಯ ಒಪ್ಪಿಕೊಳ್ಳುವುದು ಅನುಮಾನ. ಅವರಿಗೆ ಹಿಂದಿ ಬರುವುದಿಲ್ಲ. ರಾಷ್ಟ್ರ ಮಟ್ಟಕ್ಕೆ ಹೋಗಿ ಏನು ಮಾಡುತ್ತಾರೆ. ದೆಹಲಿಯಲ್ಲಿ ಹಿಂದಿ ಬರದಿದ್ದರೆ ಏನೂ ನಡೆಯುವುದಿಲ್ಲ ಎಂದರು.




