25,000ಕ್ಕೂ ಹೆಚ್ಚು ಸಿಬ್ಬಂದಿ 5 ದಿನಗಳಿಂದ ಮಾಡುತ್ತಿರುವ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ: ಆರ್ ಅಶೋಕ್

9 months ago

5 ವರ್ಷ ನಾನೇ ಸಿಎಂ ಎಂದು ಹಳ್ಳಿಯಿಂದ ದಿಲ್ಲಿವರೆಗೆ ಹಾದಿ ಬೀದಿಯಲ್ಲಿ ಬೊಬ್ಬೆ ಹೊಡೆಯುವ ಸಿಎಂ @siddaramaiah ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿಗಳು 5 ದಿನಗಳಿಂದ ಮಾಡುತ್ತಿರುವ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ, ಕಿವಿಗೆ ಬೀಳುತ್ತಿಲ್ಲ.

ಕುರ್ಚಿ ಕಿತ್ತಾಟದಲ್ಲಿ, ಬಣ ಬಡಿದಾಟದಲ್ಲಿ ಸಂಪೂರ್ಣವಾಗಿ ಮೈಮರೆತಿರುವ @INCKarnataka ಸರ್ಕಾರದ ಯಾವ ಮಂತ್ರಿಗಳೂ ಇದುವರೆಗೂ ಪ್ರತಿಭಟನಾ ನಿರತ ಪಾಲಿಕೆ ಸಿಬ್ಬಂದಿಗಳನ್ನು ಭೇಟಿ ಮಾಡುವ ಗೋಜಿಗೇ ಹೋಗಿಲ್ಲ.

ಸಿಎಂ @siddaramaiah ಅವರೇ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬಂತೆ ಅಧಿಕಾರವಿಲ್ಲದ ಕುರ್ಚಿಯಲ್ಲಿ ಎಷ್ಟು ದಿನ ಅಂಟಿಕೊಂಡು ಕೂರುತ್ತೀರಿ ಸ್ವಾಮಿ. ರಾಜೀನಾಮೆ ಕೊಟ್ಟು ಹೊರಡಿ. ಒಂದು ಸುಭದ್ರ, ಸುಸ್ಥಿರ, ಜನಪರ ಆಡಳಿತ ಕೊಡಬಲ್ಲ ಬಲಿಷ್ಠ ಮುಖ್ಯಮಂತ್ರಿಗಾಗಿ ಕನ್ನಡಿಗರು ಕಾಯುತ್ತಿದ್ದಾರೆ. ರಾಜೀನಾಮೆ ಕೊಟ್ಟು ಕನ್ನಡಿಗರ ಆಶಯ ಈಡೇರಿಸಿ.

– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ

Leave a Reply