ಬೆಂಗಳೂರು: ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರನ್ನು ಬಂಧಿಸಿರುವ ನಗರ ಪೊಲೀಸರು 1.70 ಕೋಟಿ ಮೌಲ್ಯದ ಎಂಡಿಎಂಎ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹೈಡ್ರೋ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಕೇರಳದ ಕೋಟಾಯಂನ ಲೇಖಕ ಅಂತೋಣಿ ಮ್ಯಾಥ್ಯೂ(27)ನನ್ನು ಕೋರಮಂಗಲ ಪೊಲೀಸರು ಬಂಧಿಸಿ 1 ಕೋಟಿ ಮೌಲ್ಯದ 1 ಕೆ.ಜಿ 8 ಗ್ರಾಂ ಹೈಡ್ರೋ ಗಾಂಜಾ,ಮೊಬೈಲ್,ಸ್ಕೂಟರ್ ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕೋರಮಂಗಲದ ಎನ್ ಜಿ ವಿ ಗೇಟ್ ಮುಖ್ಯರಸ್ತೆಯ ಬಳಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಆರೋಪಿ ಸ್ನಾತಕೋತ್ತರ ಪದವೀಧರನಾಗಿದ್ದು, ಲೇಖನಗಳನ್ನು ಬರೆಯುತ್ತಾ ಹೆಚ್ಚಿನ ಹಣ ಸಂಪಾದನೆ ಮಾಡಲು ಕೇರಳದಿಂದ ಹೈಡ್ರೋ ಗಾಂಜಾವನ್ನು ಕಡಿಮೆ ಬೆಲೆಗೆ ತಂದು, ಪರಿಚಯಸ್ಥರಿಗೆ, ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಡಿಸಿಪಿ ಸಾರಾ ಫಾತಿಮಾ ನೇತೃತ್ವದಲ್ಲಿ ಕೋರಮಂಗಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಘಾನಾ ಪ್ರಜೆಗಳು ಸೆರೆ: ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಘಾನಾ ದೇಶದ ಬ್ರೈಟ್ (45) ಹಾಗೂ ಕೊಫಿ (44)ನನ್ನು ಬಂಧಿಸಿರುವ ಯಲಹಂಕ ಉಪನಗರ ಪೊಲೀಸರು 70 ಲಕ್ಷ ಮೌಲ್ಯದ 700 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಹಾಗೂ ಸ್ಕೂಟರ್ ಅನ್ನು ಜಪ್ತಿ ಮಾಡಿದ್ದಾರೆ.
ಯಲಹಂಕ ಉಪನಗರದ 3ನೇ ಕ್ರಾಸ್, 1ನೇ ಮೈನ್, ದೊಡ್ಡಬೆಟ್ಟಹಳ್ಳಿಯ ಮನೆಯೊಂದರಲ್ಲಿ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿ ಆಧರಿಸಿ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಆರೋಪಿಗಳು ಚಿಕಿತ್ಸೆಯ ಸಲುವಾಗಿ 2023ರಲ್ಲಿ ಭಾರತಕ್ಕೆ ಬಂದು ಯಲಹಂಕ ಉಪನಗರದ ದೊಡ್ಡಬೆಟ್ಟಹಳ್ಳಿಯಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು, ಹೆಚ್ಚು ಹಣ ಸಂಪಾದಿಸಿ ಮೋಜಿನ ಜೀವನ ನಡೆಸಲು ಮತ್ತಿಕೆರೆಯ ಜೆಪಿ ಪಾರ್ಕ್ ಬಳಿ ಅಪರಿಚಿತ ವ್ಯಕ್ತಿಯೊಬ್ಬನಿಂದ ಎಂಡಿಎಂಎ ಕಡಿಮೆ ಬೆಲೆಗೆ ಖರೀದಿಸಿ ಸಾರ್ವಜನಿಕರಿಗೆ/ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದರು.




