ಮೈಸೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವಾರು ಅಸ್ವಭಾವಿಕ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂಬ ಒತ್ತಡವನ್ನು ಸಿಎಂ ಸಿದ್ದರಾಮಯ್ಯ ನಯವಾಗಿ ತಿರಸ್ಕರಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ ಎಂದರು.
ಆರೋಪಗಳ ಕುರಿತ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ನೀಡಿರುವ ಹೇಳಿಕೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಪೊಲೀಸ್ ಇಲಾಖೆಯವರು ಸಲ್ಲಿಸುವ ವರದಿಯ ಆಧಾರದ ಮೇಲೆ, ಎಸ್‌ಐಟಿ ಮಾಡಬೇಕೆಂಬ ಶಿಫಾರಸು ಬಂದರೆ ರಚಿಸುತ್ತೇವೆ. ಶನಿವಾರದೊಳಗೆ ಎಲ್ಲವೂ ಗೊತ್ತಾಗಲಿದೆ ಎಂದರು.
ದೂರುದಾರ 10 ವರ್ಷ ತಲೆಮರೆಸಿಕೊಂಡಿದ್ದ. ಆತ, ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ. ನಾನೇ ಹೂತು ಹಾಕಿದ್ದೇನೆ ಎಂದೆಲ್ಲಾ ಹೇಳಿದ್ದಾನೆ. ಆ ಜಾಗಕ್ಕೆ ಕರೆದುಕೊಂಡು ಹೋದರೆ ಹೆಣಗಳನ್ನು ತೋರಿಸುತ್ತೇನೆ ಎಂದೂ ಹೇಳಿದ್ದಾನೆ. ಪೊಲೀಸರು ಏನು ಹೇಳುತ್ತಾರೆಯೋ ನೋಡೋಣ ಎಂದರು.
ಈ ಪ್ರಕರಣದಲ್ಲಿ ತನಿಖೆ ಸರಿಯಾಗಿ ಆಗುತ್ತಿಲ್ಲ ಎಂಬ ಗೋಪಾಲಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾನೂನು ರೀತಿ ಮಾಡಬೇಕಲ್ಲವೇ? ಕಾನೂನು ಬಿಟ್ಟು ಮಾಡಕ್ಕಾಗುತ್ತಾ? ಎತ್ತು ಈಯ್ತು ಅಂದ್ರೆ ಕೊಟ್ಟಿಗೆಗ್ ಕಟ್ಟು ಅನ್ನೋದಾ? ಎತ್ತು ಕರು ಹಾಕುವುದಿಲ್ಲ. ಕೊಟ್ಟಿಗೆಗೆ ಕಟ್ಟಿ ಅಂದ್ರೆ ಕಟ್ಟಿಬಿಡೋದಾ? ಎಲ್ಲವನ್ನೂ ಕಾನೂನು ರೀತಿ ಮಾಡುತ್ತೇವೆ ಎಂದರು.




