ಮೈಸೂರು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಮೈಸೂರು ಸಿದ್ದಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿ.ಯು.ಸಿ. ಗೆ ಸಮಾನಾಂತರ ಕೋರ್ಸು ಮಾಡಿದ ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿ.ವಿ.ಎ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ.ಪದವಿ ಪ್ರವೇಶಾತಿಗಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ. ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಜುಲೈ 30, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಅಥವಾ htts://uucms.karnataka.gov.in ಹಾಗೂ https://www.cavamysore.karnataka.gov.in. ಸಂಪರ್ಕಿಸಬಹುದು.




