ಬೆಂಗಳೂರು: ನ್ಯಾಯಾಧಿಕರಣದಿಂದ ನಮಗೆ ಹಂಚಿಕೆಯಾಗಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ನಮ್ಮ ರಾಜ್ಯದ ಸಂಸದರು ಬಾಯಿ ಬಿಡುತ್ತಿಲ್ಲ. ಇವರನ್ನು ಆಯ್ಕೆ ಮಾಡಿ ಕಳುಹಿಸಿದ್ದು ಏಕೆ? ಎಂದು ಪ್ರಶ್ನಿಸಿದರು.
ಕೆಲಸಕ್ಕೆ ಬಾರದ ವಿಚಾರಗಳನ್ನೆಲ್ಲಾ ಮಾತನಾಡುವ ಸಂಸದರು ರಾಜ್ಯದ ನೆಲ-ಜಲ, ಭಾಷೆ, ಹಿತಾಸಕ್ತಿ ವಿಚಾರ ಬಂದಾಗ ಮಾತನಾಡುವುದಿಲ್ಲ. ಇಂತಹ ಸಂಸದರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಕರೆನೀಡಿದರು.
ಕೇಂದ್ರ ಸರ್ಕಾರ ಪ್ರತಿಬಾರಿಯೂ ಪ್ರತಿ ಚುನಾವಣೆಯಲ್ಲೂ ಕಳಸಾ ಬಂಡೂರಿ ಮತ್ತು ಮೇಕೆದಾಟು ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಮಾತನಾಡುತ್ತದೆ. ಮತದಾನ ಮುಗಿದ ಮೇಲೆ ವರಸೆ ಬದಲಾಯಿಸುತ್ತದೆ ಎಂದು ಆಕ್ಷೇಪ ವ್ತಕ್ತಪಡಿಸಿದರು.




