ದೆಹಲಿ: ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದ ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರ ವರದಿಯನ್ನು ಸರ್ಕಾರ ಅಂಗೀಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಸಿ.ಎ ಹಾಗೂ ಡಿಎನ್ಎ, ಆರ್.ಸಿ.ಬಿ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗಿದೆ. ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು, ಎಸ್. ಪಿ ಹಾಗೂ ಎಸಿಪಿ ಹಾಗು ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ ಎಂದರು.
ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ನ್ಯಾ.ಮೈಕಲ್ ಕುನ್ಹಾ ಅವರ ವರದಿಯನುಸಾರ ಸರ್ಕಾರವು ಶಿಸ್ತಿನ ಕ್ರಮವನ್ನು ಜರುಗಿಸಿದೆ ಎಂದರು.




