ದೆಹಲಿ: ಮಹದಾಯಿ ವಿಚಾರ ನ್ಯಾಯಮಂಡಳಿಯಲ್ಲಿ ಈಗಾಗಲೇ ಇತ್ಯರ್ಥವಾಗಿದ್ದರೂ, ಗೋವಾ ಮುಖ್ಯಮಂತ್ರಿಗಳ ಹೇಳಿಕೆ ಸರಿಯಾದುದಲ್ಲ. ಮಹದಾಯಿ ಯೋಜನೆಗೆ ಪರಿಸರ ಒಪ್ಪಿಗೆ ಸಿಗಬೇಕಾಗಿದೆಯೇ ಹೊರತು, ಉಚ್ಛ ನ್ಯಾಯಾಲಯದಲ್ಲಿಯೂ ಈ ವಿಚಾರ ಇತ್ಯರ್ಥವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸಿಎಂ ಅವರು ನ್ಯಾಯಾಲಯದ ಮೊರೆ ಹೋಗಲು ನಮ್ಮ ಅಭ್ಯಂತರವಿಲ್ಲ. ನ್ಯಾಯಮಂಡಳಿ ಈಗಾಗಲೇ ನಿರ್ಧಾರ ಮಾಡಿದ್ದು, ಸುಪ್ರೀಂ ಕೋರ್ಟ್ ಸಹ ಎಲ್ಲಾ ವಿವಾದಗಳನ್ನು ಬಗೆಹರಿಸಿದೆ ಎಂದರು.
ಗೋವಾ ಮುಖ್ಯಮಂತ್ರಿಗಳು ಹೇಳಿರುವ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ಏಕೆ ತರಬೇಕು? ಗೋವಾ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದ ಮೊರೆ ಹೋಗಲು ಯಾವ ಹಕ್ಕೂ (ಲೋಕಸ್ ಸ್ಯಾಂಡಿ) ಇಲ್ಲ. ಅರಣ್ಯ ಹಾಗೂ ಪರಿಸರ ಇಲಾಖೆಯು ಕೇಂದ್ರ ಸರ್ಕಾರದಡಿಯಲ್ಲಿದ್ದು, ಕೇಂದ್ರ ಸರ್ಕಾರವು ಈ ಬಗ್ಗೆ ತೀರುವಳಿ ನೀಡಬೇಕಿದೆ ಎಂದರು.
ನಿಗಮ – ಮಂಡಳಿಗಳಿಗೆ ನೇಮಕ ಸಂಬಂಧ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯವನ್ನು ನೀಡಿದ್ದೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ವಿಧಾನ ಪರಿಷತ್ತಿಗೆ ನಾಮನಿರ್ದೇಶನ ವಿಧಾನ ಮಂಡಲದ ಅಧಿವೇಶನಕ್ಕೆ ಮುನ್ನವೇ ಆಗಬಹುದು ಎಂದರು.



