ಹುಬ್ಬಳ್ಳಿ: ಸಮಾನ ಶಿಕ್ಷಣ, ಹಕ್ಕು ಮತ್ತು ಅವಕಾಶಗಳು ದೊರೆತಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ನಾವೆಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ನಮ್ಮೆಲ್ಲರನ್ನೂ ಬೆಸೆಯುವ ಭಾವೈಕ್ಯತೆ ಸಮಾಜದಲ್ಲಿ ನೆಲೆಸಬೇಕು. ಅಂಬೇಡ್ಕರ್ ಮತ್ತು ಬಸವೇಶ್ವರರ ಚಿಂತನೆಗಳು ಸಮಾಜದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ನೀಡುತ್ತವೆ ಎಂದರು.
ಅಂಬೇಡ್ಕರ್, ಬಸವೇಶ್ವರರ ಅನುಯಾಯಿಗಳು ಒಂದಾಗಬೇಕು. ಎಲ್ಲ ಸಮಸ್ಯೆಗಳಿಗೆ ಅಂಬೇಡ್ಕರ್ ಚಿಂತನೆಗಳಲ್ಲಿ ಪರಿಹಾರ ಇದೆ. ಅಂಬೇಡ್ಕರ್, ಬಸವ ಜಯಂತಿಯಲ್ಲಿ ಮುಸ್ಲಿಮರು ಭಾಗವಹಿಸಿ, ನಿಮ್ಮ ಕಾರ್ಯಗಳಲ್ಲಿ ನಾವು ಭಾಗವಹಿಸುತ್ತೇವೆ. ಒಂದೇ ವೇದಿಕೆಯಲ್ಲಿ ಹೊಸ ವಿಚಾರಗಳ ಚರ್ಚೆ ನಡೆಯಲಿ ಎಂದು ಕರೆ ನೀಡಿದರು.
ಸೂಫಿ ಸಂತರು ಭಾವೈಕ್ಯ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು. ಕರ್ನಾಟಕ ವಕ್ಫ್ ಮಂಡಳಿಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹4 ಸಾವಿರ ಕೋಟಿ ಅನುದಾನ ನೀಡಿದ್ದು, ಇದರ ಸದುಪಯೋಗ ಪಡೆದುಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಸ್ಥಾನಗಳಿಗೆ ತರಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷ ಹಾಗೂ ಧರ್ಮಗುರು ಸೈಯದ್ ಮುಹಮ್ಮದ್ ಅಲಿ ಅಲ್ ಹೋಸೈನಿ, ಶಿರಹಟ್ಟಿಯ ಶ್ರೀ ದಿಂಗಾಲೇಶ್ವರ ಸ್ವಾಮೀಜಿ, ಸಚಿವರಾದ ಶಿವಾನಂದ ಪಾಟೀಲ, ರಹೀಂ ಖಾನ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.




