ಹಾಸನ: ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸಾರ್ವಜನಿಕರು ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದ್ದು, ತಲಾ ಆದಾಯ ಏರಿಕೆಯಾಗಿ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಅರಸೀಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಳಿಸುವುದರ ಜೊತೆಗೆ ಅಭಿವೃದ್ಧಿಯಲ್ಲೂ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ ಎಂದರು.
ಬಡವ ಶ್ರೀಮಂತ ಎಂಬ ಅಸಮಾನತೆ ತೊಡೆದು ಹಾಕಿ ಸಮಾಜದಲ್ಲಿ ಪರಿವರ್ತನೆ ತರುವುದರಿಂದ ಸಮ ಸಮಾಜ ನಿರ್ಮಾಣಕ್ಕೆ ಸಹಾಯವಾಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದರು.
52 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ. ಎತ್ತಿನಹೊಳೆ ಯೋಜನೆಗೆ ಇನ್ನೂ 6000 ಕೋಟಿ ರೂ.ಗಳು ಬೇಕಾಗುತ್ತದೆ. 2 ವರ್ಷದಲ್ಲಿ ಸಂಪೂರ್ಣ ಮುಗಿಸಿ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದರು.
ನೀರಾವರಿ, ರಸ್ತೆಗಳ ಅಭಿವೃದ್ಧಿ, ಶಿಕ್ಷಣ, ಹಾಗೂ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ ಕೆಲಸ ಮಾಡಲಾಗುತ್ತಿದೆ. ಅರಸೀಕೆರೆ ಭಾಗದಲ್ಲಿ ಹೆಚ್ಚು ತೆಂಗು ಬೆಳೆಯುತ್ತಾರೆ ಈ ಬೆಳೆಗೆ ಕಪ್ಪು ತಲೆ ಹುಳು, ಕಾಂಡ ಸೊರುವುದು ಮತ್ತಿತರ ರೋಗ ರುಜಿನಗಳು ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಷ್ಟೇ ಹಣ ಖರ್ಚು ಆದರೂ ರೋಗ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು.
ಅರಸೀಕೆರೆ ತಾಲ್ಲೂಕಿನಲ್ಲಿ ಇಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ಉದ್ಘಾಟನೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅರಸೀಕೆರೆಯಲ್ಲಿ ಇದೊಂದು ಐತಿಹಾಸಿಕ ದಿನ ಕಾರ್ಯಕ್ರಮದಲ್ಲಿ ನೆರೆದಿರುವ ಜನಸ್ತೋಮ ನೋಡಿದರೆ ಶಿವಲಿಂಗೇಗೌಡ ಅವರ ಮೇಲಿನ ಜನಪ್ರಿಯತೆ ತೋರುತ್ತದೆ ಎಂದರು.
ಶಿವಲಿಂಗೇಗೌಡರು ಜನಪರ ಕಾಳಜಿಯಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ವಿಧಾನ ಸೌಧದಲ್ಲೂ ಯಾವುದೇ ವಿಶೇಷಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಮಾಣಿಕ ಪ್ರಯತ್ನ ಮಾಡುತ್ತಾರೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ತಂದೆ ತಾಯಿ, ದೇವರು, ಗುರುವಿನ ಹಾಗೂ ಸಮಾಜದ ಋಣ ತೀರಿಸಬೇಕು. ಈ ನಿಟ್ಟಿನಲ್ಲಿ ಶಿವಲಿಂಗೇಗೌಡರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರೈತರ ಬದುಕು ಹಸನು ಮಾಡಿ ಜನರ ಪ್ರೀತಿ ಗಳಿಸಿದ್ದಾರೆ ಎಂದರು.
ಯಾರೂ ಇಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಇದ್ದಂತಹ ಅವಕಾಶ ಬಳಸಿಕೊಂಡು ರಾಜಕೀಯ ಎಂಬ ವ್ಯವಸಾಯದಲ್ಲಿ ಉತ್ತಮ ಕೆಲಸ ಮಾಡಿದರೆ ಅವುಗಳು ಶಾಶ್ವತವಾಗಿ ಉಳಿಯುತ್ತವೆ. ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಸುಸ್ಥಿರ ಬದುಕಿಗೆ ದಾರಿ ಮಾಡಿದೆ ಎಂದರು.
ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಗ್ರಾಮೀಣ ಜನರ ಅಭ್ಯುದಯಕ್ಕೆ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿಗಳು ಕ್ರೀಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇರ್ಲ್ದಜೆಗೆ ಏರಿಸಲಾಗಿದೆ. ನೆನೆಗುದ್ದಿಗೆ ಬಿದ್ದಿದ್ದ ರೈಲ್ವೆ ಮೇಲ್ಸೇತುವೆಯ ಕಾಮಗಾರಿಗೆ 21 ಕೋಟಿಗಳು ನೀಡಲಾಗಿದೆ. ಕಳೆದ ಬಾರಿ ಹಾಸನಾಂಬ ದೇವಿಯ ದರ್ಶನಕ್ಕೆ ರಾಜ್ಯ ವಿವಿಧ ಮೂಲಗಳಿಂದ 20 ಲಕ್ಷ ಭಕ್ತಾಧಿಗಳು ಆಗಮಿಸಿ ಸುಸೂತ್ರವಾಗಿ ದೇವಿ ದರ್ಶನ ಪಡೆದಿದ್ದಾರೆ 12 ಕೋಟಿಗೂ ಅಧಿಕ ಆದಾಯ ಬಂದಿರುತ್ತದೆ ಎಂದರು.
ಕಂದಾಯ ಇಲಾಖೆಯು ಪೋಡಿ, ಪೌತಿ ಖಾತೆ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥ ಮತ್ತಿತರ ವಿಷಯಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಹಾಸನ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ ಇದು ಹೆಗ್ಗಳಿಕೆ ವಿಷಯ ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು ಎಂದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಹಣಕಾಸು ಒದಗಿಸಲು ಶಕ್ತಿ ಸಾಮರ್ಥ್ಯ ಸರ್ಕಾರಕ್ಕಿದೆ ಎಂದರು. ರೈತರ ಆರ್ಥಿಕ ಸದೃಡತೆಗಾಗಿ ಹಾಲಿನ ದರ 4 ರೂಗಳನ್ನು ಹೆಚ್ಚಿಸಿದೆ ಕ್ಷೀರ ಭಾಗ್ಯ ಯೋಜನೆಯಡಿ 5 ರೂ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್ ಜಮೀರ್ ಅಹಮದ್ ಖಾನ್ ಅವರು ಮಾತನಾಡಿ ನಮ್ಮ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದಲಾಗಿದ್ದ ಭರವಸೆಗಳನ್ನು ಗ್ಯಾರೆಂಟಿ ಯೋಜನೆಗಳ ಜಾರಿ ಮಾಡುವ ಮೂಲಕ ಈಡೇರಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಮಾತನಾಡಿ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಅರಸೀಕೆರೆ ಕ್ಷೇತ್ರದ ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಿದೆ. ಗ್ಯಾರೆಂಟಿ ಯೋಜನೆಯಿಂದ ಜನ ಸಾಮಾನ್ಯರಿಗೆ ಆರ್ಥಿಕ ಸ್ವಾಲಂಬನೆಯಾಗಿದೆ ಎಂದರು.
ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಡವರ ಪರವಾಗಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು.
ಇಂಜಿನಿಯರ್ ಕಾಲೇಜ್ ತಾಲ್ಲೂಕು ಕೇಂದ್ರಕ್ಕೆ ನೀಡಿ 240 ಸೀಟ್ ಮಂಜೂರಾಗಿದೆ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ತಾಲ್ಲೂಕಿನಲ್ಲಿ 8 ಮೊರಾರ್ಜಿ ದೇಸಾಯಿ ವಸತಿ ಶಾಲೆ ತೆರೆಯಲಾಗಿದೆ. ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ 36 ಕೋಟಿ ರೂಗಳ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಅರಸೀಕೆರೆ ತಾಲ್ಲೂಕಿಗೆ ಕುಡಿಯುವ ನೀರಿಗೆ 370 ಕೋಟಿ ಹಣ ಮಂಜೂರು ಮಾಡಿದರು. ಎತ್ತಿನಹೊಳೆ ಯೋಜನೆಯಿಂದ ಅರಸೀಕೆರೆ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸಲಾಗಿದೆ. ಹಾರನಹಳ್ಳಿ ಕಾವೇರಿ ಬೆಸನ್ ನಿಗೆ 50 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ. ಗಂಡಸಿ, ಬಾಣವಾರ ಕುಡಿಯುವ ನೀರಿಗೆ 100 ಕೋಟಿ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಕಲ್ಪತರು ನಾಡಿನ ತೆಂಗು ಬೆಳೆಗೆ ರೋಗ ರುಜಿನಗಳು ಹೆಚ್ಚಾಗುತ್ತಿದೆ ಇದನ್ನು ತಡೆಗಟ್ಟಲು ಸರ್ಕಾರ ತುರ್ತಾಗಿ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.
ಕೆ.ಎಸ್ ಲತಾ ಕುಮಾರಿ, ತರೀಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ, ಅರಸೀಕೆರೆ ನಗರಸಭೆಯ ಅಧ್ಯಕ್ಷ ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ್, ಅರಸೀಕೆರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ಅರುಣ್‌ಕುಮಾರ್, ಅರಸೀಕೆರೆ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಧರ್ಮಶೇಖರ್, ಮೈಸೂರು ವಿಭಾಗದ ಆಯುಕ್ತ ಡಿ.ಎಸ್.ರಮೇಶ್, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.




