ಬೆಂಗಳೂರು: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್- 1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಕೈಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ವರ್ಗಾವಣೆ ಪ್ರಕ್ರಿಯೆಯಲ್ಲಿ 31 ಜಿಲ್ಲೆಗಳಲ್ಲಿನ ಒಟ್ಟು 2,697 ನೌಕರರಿಂದ ವರ್ಗಾವಣೆಗಾಗಿ ಅರ್ಜಿಗಳು ಸ್ವೀಕೃತವಾಗಿದ್ದವು. ಇವುಗಳಲ್ಲಿ ನೌಕರರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿದ 1,300 ನೌಕರರಿಗೆ ಆನ್ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಸ್ಥಳದಲ್ಲೇ ನೌಕರರಿಗೆ ನೀಡಲಾಗಿದೆ ಎಂದಿದ್ದಾರೆ.
ಮೊದಲ ಸುತ್ತು ಹಾಗೂ ಎರಡನೇ ಸುತ್ತಿನಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ (Serious Ailments), ವಿಶೇಷಚೇತನರು ಹಾಗೂ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಜುಲೈ 25ರಂದು ನಡೆಸಿ 161 ನೌಕರರಿಗೆ ಹಾಗೂ ಎರಡನೆಯ ಹಂತದಲ್ಲಿ ಸಾಮಾನ್ಯ ಕೋರಿಕೆ ಪ್ರಕರಣಗಳ 619 ನೌಕರರಿಗೆ ಜುಲೈ 28ರಂದು ಹಾಗೂ ಕೊನೆಯ ಹಂತದಲ್ಲಿ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಜುಲೈ 29 ಮತ್ತು 30ರಂದು ಕೈಗೊಂಡು 520 ನೌಕರರಿಗೆ ಡಿಜಿಟಲ್ ಸಹಿ ಇರುವ ವರ್ಗಾವಣೆ ಆದೇಶಗಳನ್ನು ವಿತರಿಸಲಾಯಿತು ಎಂದಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮೊದಲ ಬಾರಿಗೆ ವರ್ಗಾವಣೆ ಪ್ರಕ್ರಿಯೆಯನ್ನು ಆನ್ಲೈನ್ ಕೌನ್ಸೆಲಿಂಗ್ ಮೂಲಕ ಯಶಸ್ವಿಯಾಗಿ ನಡೆಸಿ, ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.




