ನವೋದಯ ವಿದ್ಯಾಲಯ: ಖಾಲಿ ಇರುವ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ
ಹಾಸನ: ಜವಾಹರ್ ನವೋದಯ ವಿದ್ಯಾಲಯ, ಮಾವಿನಕೆರೆ, ಹಾಸನ ಜಿಲ್ಲೆಯಲ್ಲಿ 9 ಮತ್ತು 11 ನೇ ತರಗತಿಯಲ್ಲಿ 2026-27 ಶೈಕ್ಷಣಿಕ ವರ್ಷಕ್ಕಾಗಿ ಖಾಲಿ ಇರುವ ಸ್ಥಾನಗಳಿಗೆ, ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
2025-26ನೇ ಸಾಲಿನಲ್ಲಿ ಹಾಸನ ಜಿಲ್ಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ವಾಸವಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ನಲ್ಲಿ https://cbseitms. nic.in/2025/nvsix_9 ವೆಬ್ ಸೈಟ್ ಮೂಲಕ ಆರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ: 01.05.2011 ರಿಂದ 31.07.2013 ರೊಳಗೆ ಜನಿಸಿರಬೇಕು (ಎರಡು ದಿನ ಸೇರಿ). ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23.09.2025 ಮತ್ತು : 07.02.2026 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
2025-26ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಅಂದರೆ ಏಪ್ರಿಲ್ 2025 ರಿಂದ ಮಾರ್ಚ್ 2026 ರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ https://cbseitms. nic.in/2025/nvsxi_11 ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01.06.2009 ರಿಂದ 31.07.2011 ರೊಳಗೆ ಜನಿಸಿರಬೇಕು (ಎರಡು ದಿನ ಸೇರಿ), ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.09.2025 ಮತ್ತು ಪ್ರವೇಶ ಪರೀಕ್ಷೆಯು ದಿನಾಂಕ: 07.02.2026 ರಂದು ನಡೆಯಲಿದೆ.




