ಧರ್ಮಸ್ಥಳ ಫೈಲ್ಸ್: ಸರ್ಕಾರ, ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಉಂಟಾಗದಂತೆ ಕ್ರಮ ಕೈಗೊಳ್ಳಲು ಒತ್ತಡ

8 months ago

ಬೆಂಗಳೂರು: ಅಸಹಜ ಸಾವುಗಳ ವಿವಾದ ಕುರಿತಂತೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ರಾಜ್ಯ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿನ ಮೇಲೆ ಯಾವುದೇ ಪರಿಣಾಮ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಹುತೇಕ ಎಲ್ಲಾ ಸಚಿವರು ಆಗ್ರಹಿಸಿದ್ದಾರೆ ಎಂದರು ಉನ್ನತ ಮೂಲಗಳಿಂದ ತಿಳಿದುಬಂದಿದೆ. 

ಈ ವಿಷಯದ ಕುರಿತಾಗಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಬಹುತೇಕ ಸಚಿವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಸರ್ಕಾರ ಅತ್ಯಂತ ಎಚ್ಚರಿಕೆಯ ನಡೆ ಇಡಬೇಕಾಗಿದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ವಿಶೇಷ ತನಿಖಾ ತಂಡ ನಡೆಸುತ್ತಿರುವ ಕಾರ್ಯಾಚರಣೆ ಕುರಿತು ಸಭೆಗೆ ವಿವರಣೆ ನೀಡಿದ ಗೃಹಸಚಿವ ಜಿ ಪರಮೇಶ್ವರ್, ತನಿಖಾ ತಂಡ ಪ್ರತಿನಿತ್ಯದ ಮಾಹಿತಿಯನ್ನು ತಮಗೆ ನೀಡುತ್ತಿದೆ. ತನಿಖೆ ವಿಚಾರದಲ್ಲಿ ಎಲ್ಲಿಯೂ ಯಾವುದೇ ರೀತಿಯ ಹಸ್ತಕ್ಷೇಪ ನಡೆಯುತ್ತಿಲ್ಲ. ತನಿಖಾ ವರದಿ ಬಂದ ನಂತರ ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

Leave a Reply