ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೂಪ್ ವೇ ಅಳವಡಿಸಲು ಸಂಬಂಧ ಟೆಂಡರ್ ಕರೆಯಲಾಗಿದೆ: ಹೆಚ್.ಕೆ.ಪಾಟೀಲ್

8 months ago

ಬೆಂಗಳೂರು: ವಿಶ್ವ ವಿಖ್ಯಾತ ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೂಪ್ ವೇ ಅಳವಡಿಸುವ ಸಂಬಂಧ ಟೆಂಡರ್ ಕರೆಯಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮೇಲ್ಮನೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ಡಿ.ಟಿ.ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಏಕಶಿಲಾ ಬೆಟ್ಟಕ್ಕೆ ರೂಪ್ ವೇ ಅಳವಡಿಸುವುದನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಏಕಶಿಲಾ ಬೆಟ್ಟಕ್ಕೆ ರೂಪ್ ವೇ ಅಳವಡಿಸುವ ಸಂಬಂಧ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಟೆಂಡರ್ ಮುಗಿದ ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು ಎಂದರು.

Leave a Reply