ಬೆಂಗಳೂರು: ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಸುರೇಶ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿತ್ತು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವದ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳಾದ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಮತ್ತು ಎಂ.ಸುರೇಶ್ ಅವರ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂ.ಸುರೇಶ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯ ಅವರು ಎಂ.ಸುರೇಶ್ ಅವರ ಪತ್ನಿ ಮತ್ತು ಮಗನ್ನು ಭೇಟಿ ಮಾಡಿ, ಸ್ವಾಂತನ ಹೇಳಿದರು.
ಇದೇ ಸಂದರ್ಭದಲ್ಲಿ ಮಾತಾಡಿದ ಡಿ.ಕೆ.ಶಿವಕುಮಾರ್, ಎಂ.ಸುರೇಶ್ ನಿಷ್ಟಾವಂತ ಕಾರ್ಯಕರ್ತರಾಗಿದ್ದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರರಾಗಿದ್ದರು. ನೇರ, ನಿಷ್ಟುರವಾದ ರಾಜಕಾರಣಿ ಯಾವುದೇ ಸಂದರ್ಭದಲ್ಲಿ ಸರಿ ಅನ್ನಿಸಿದನ್ನ ನೇರವಾಗಿ ಹೇಳುತ್ತಿದ್ದರು. ಪ್ರಾಮಾಣಿಕ ಹೋರಾಟಗಾರ ಎಂ.ಸುರೇಶ್ ರವರ ಆತ್ಮಕ್ಕೆ ಶಾಂತಿ, ಅವರ ಕುಟುಂಬದ ಜೊತೆಯಲ್ಲಿ ಕಾಂಗ್ರೆಸ್ ಪಕ್ಷ ಇರುತ್ತದೆ ಎಂದರು.
ರಾಮಲಿಂಗಾರೆಡ್ಡಿ ಮಾತನಾಡಿ, ಎಂ.ಸುರೇಶ್ ಅವರು ಕಾಂಗ್ರೆಸ್ ಪಕ್ಷದಿಂದಲೆ ರಾಜಕೀಯ ಪ್ರವೇಶ ಮಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಪ್ರಾಮಾಣಿಕ, ನಿಷ್ಟಾವಂತ ಕಾಂಗ್ರೆಸ್ ಪಕ್ಷದ ನಾಯಕರಾದ ಎಂ.ಸುರೇಶ್ ರವರ ಆಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಮಾಜಿ ಮೇಯರ್ ಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.