ಬಿಪಿಎಲ್ ಕಾರ್ಡುಗಳಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಜನರಿಗೆ ಸಿಹಿ ಸುದ್ದಿ

8 months ago

ಬೆಂಗಳೂರು: ಬಿಪಿಎಲ್ ಕಾರ್ಡುಗಳಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಜನರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ವಿಧಾನಸಭೆ ಅಧಿವೇಶನ ಪೂರ್ಣಗೊಂಡಕೂಡಲೇ  ರಾಜ್ಯದಲ್ಲಿ ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ  ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ 15 ಲಕ್ಷ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವ ಅವಶ್ಯಕತೆ ಇದೆ ಎಂದರು.

ಹೊಸದಾಗಿ 3.27 ಲಕ್ಷ ಮಂದಿ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಎರಡು ವರ್ಷಗಳು ಕಳೆದಿದ್ದರೂ ಇದುವರೆಗೂ ಅರ್ಜಿದಾರರಿಗೆ ಕಾರ್ಡ್ ವಿತರಣೆ ಮಾಡಲಾಗಿಲ್ಲ ಎಂದರು.

ದೇಶದಲ್ಲಿ ಅತಿ ಹೆಚ್ಚು ಶೇ.74 ಮಂದಿ ಬಿಪಿಎಲ್ ಕಾರ್ಡ್ ದಾರರು ನಮ್ಮ ರಾಜ್ಯದಲ್ಲಿದ್ದಾರೆ. ಬೇರೆ ರಾಜ್ಯಗಳು ಶೇ.50ರಷ್ಟು ದಾಟಿಲ್ಲ, ನಮ್ಮ ರಾಜ್ಯದಲ್ಲಿ ಅರ್ಹತೆಯಿಲ್ಲದ 15 ಲಕ್ಷ ಬಿಪಿಎಲ್ ಕಾರ್ಡ್ ದಾರರಿದ್ದಾರೆ. ಅವುಗಳನ್ನು ಪರಿಷ್ಕರಣೆ ಮಾಡಿ ಎಪಿಎಲ್ ಕಾರ್ಡ್ ನೀಡಿದರೆ ಹೊಸದಾಗಿ 3.27 ಲಕ್ಷ ಮಂದಿಗೆ ಬಿಪಿಎಲ್ ಕಾರ್ಡ್ ಕೊಡುವುದಕ್ಕೆ ತೊಂದರೆಯಾಗುವುದಿಲ್ಲ ಎಂದರು.

Leave a Reply