ಬೆಂಗಳೂರು: ಹೈನುಗಾರಿಕೆಗಾಗಿ ಎಮ್ಮೆಗಳನ್ನು ಖರೀದಿಸಲು ಮುಂದಾಗಿದ್ದ ಸ್ಯಾಂಡಲ್ ವುಡ್ ನಿರ್ದೇಶಕ ಪ್ರೇಮ್ ಅವರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರೇಮ್ ಅವರ ಮ್ಯಾನೇಜರ್ ದಶಾವರ ಚಂದ್ರು ನೀಡಿರುವ ದೂರಿನ ಅನ್ವಯ ಗುಜರಾತ್ ಮೂಲದ ವಘೇಲಾ ವನರಾಜ್ ಭಾಯ್ ವಿರುದ್ಧ ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರೇಮ್ ಅವರು ಹೈನುಗಾರಿಕೆ ಮಾಡಲು ಎಮ್ಮೆಗಳನ್ನು ಖರೀದಿಸಲು ಮುಂದಾದಾಗ ಗುಜರಾತ್ನ ಗಧಡಾ ಮೂಲದ ವನರಾಜ್ ಭಾಯ್ ಎಂಬಾತನ ಪರಿಚಯವಾಗಿತ್ತು. ಎಮ್ಮೆಗಳ ಖರೀದಿ ಮಾತುಕತೆ ಮಾಡಿದ್ದ ಪ್ರೇಮ್, ಜುಲೈನಲ್ಲಿ 25 ಸಾವಿರ ರೂ. ಮುಂಗಡ ಹಣ ವರ್ಗಾಯಿಸಿದ್ದರು. ಬಳಿಕ ಹಂತ – ಹಂತವಾಗಿ ಒಟ್ಟು 4.50 ಲಕ್ಷ ರೂ. ಹಣವನ್ನು ಆರೋಪಿ ವನರಾಜ್ ಭಾಯ್ ಖಾತೆಗೆ ವರ್ಗಾಯಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಲ್ಲದೇ, ವಾಟ್ಸ್ಆ್ಪಪ್ ಮೂಲಕ ಎರಡು ಎಮ್ಮೆಗಳ ವಿಡಿಯೋ ಕಳಿಸಿದ್ದ ವನರಾಜ್ ಭಾಯ್, ಅವುಗಳನ್ನ ಕಳಿಸಿಕೊಡುತ್ತಿರುವುದಾಗಿ ತಿಳಿಸಿದ್ದ. ಆದರೆ, ಒಂದು ವಾರ ಕಳೆದರೂ ಎಮ್ಮೆಗಳು ಬಾರದಿದ್ದಾಗ ಹಣ ವಾಪಸ್ ನೀಡುವಂತೆ ಪ್ರೇಮ್ ಅವರು ಕೇಳಿದ್ದರು. ಆದರೆ ಹಣ ನೀಡದ ವನರಾಜ್ ಭಾಯ್ ಸತಾಯಿಸುತ್ತಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ವನರಾಜ್ ಭಾಯ್ ನೀಡಿದ್ದ ವಿಳಾಸಕ್ಕೆ ಪರಿಚಿತರನ್ನು ಕಳುಹಿಸಿ ವಿಚಾರಿಸಿದಾಗ ಆತ ಆ ವಿಳಾಸದಲ್ಲಿ ಇಲ್ಲ ಎಂದು ತಿಳಿದು ಬಂದಿದೆ. ಸದ್ಯ ಮೊಬೈಲ್ ಆಫ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ವನರಾಜ್ ಭಾಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮ್ಮ ಮ್ಯಾನೇಜರ್ ದಶಾವರ ಚಂದ್ರು ಮೂಲಕ ಪ್ರೇಮ್ ದೂರು ಕೊಡಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾ ಲೇಔಟ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಹಣ ವರ್ಗಾವಣೆಯಾದ ಖಾತೆಯ ವಿವರಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.




