ಜು.15 ರಿಂದ ಅಗ್ನಿಪಥ ಯೋಜನೆ ವಿರುದ್ಧ ಅರ್ಜಿಗಳ ವಿಚಾರಣೆ ಮಾಡಲಿರುವ ಸುಪ್ರೀಂ

4 years ago

ದೆಹಲಿ:  ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಜುಲೈ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿವಿಧ ಅರ್ಜಿಗಳು ಸಲ್ಲಿಕೆಯಾಗಿದ್ದವು. ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಗಳಲ್ಲಿ ಸರ್ಕಾರವನ್ನು ಆಲಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿಯನ್ನು ಸಲ್ಲಿಸಿದೆ.

Leave a Reply