ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ವಿಧಾನಸಭೆ ಕಲಾಪದಲ್ಲಿ ಆರ್ಎಸ್ಎಸ್ ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೆಯ ಸಾಲನ್ನು ಹಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಅವರು ಸ್ಪಷ್ಟನೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಾನು ಹುಟ್ಟಿನಿಂದಲೂ ಕಾಂಗ್ರೆಸ್ಸಿಗ. ಕೊನೆಯವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರುವುದಾಗಿ ಹೇಳಿದ್ದಾರೆ. ಬಿಜೆಪಿ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದರು.
ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ ಎಂದರು.
ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ ಎಸ್ ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್ ಎಸ್ ಎಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದರು.
ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ ಎಂದರು.
ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು ಅದೇ ರೀತಿ ನಾವು ಮಾಡಿದ್ದೇವೆ ಎಂದರು.




