ಚಿತ್ರದುರ್ಗ: ಗಣೇಶ ಹಬ್ಬದ ಪ್ರಯುಕ್ತ ಆ.27ರಂದು ಜಿಲ್ಲೆಯಾದ್ಯಂತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಿದ್ದು, ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಂದೆಡೆ ಲಭ್ಯವಿರುವಂತೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಸಮಿತಿ ರಚನೆ ಮಾಡಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಏಕ ಗವಾಕ್ಷಿ ಸಮಿತಿಯ ಅಧ್ಯಕ್ಷರಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಡ್‍ಕಾನ್ಸ್‍ಟೇಬಲ್, ಗ್ರಾಮ ಆಡಳಿತಾಧಿಕಾರಿ, ಲೈನ್‍ಮ್ಯಾನ್ ಸದಸ್ಯರಾಗಿದ್ದಾರೆ.
ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಏಕ ಗವಾಕ್ಷಿ ಕೇಂದ್ರಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲು ಬಂದಂತಹ ಕೋರಿಕೆಗಳನ್ನು ಆ ದಿನದಂದೇ ನಿಯಮಾನುಸಾರ ವಿಲೇವಾರಿ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಸೂಚನೆ ನೀಡಿದ್ದಾರೆ.




