ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ.
ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ. ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ.
ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




