ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪಾಡು ಈಗ ಯಾರಿಗೂ ಬೇಡದಂತಾಗಿದೆ. ಅಭಿಮಾನಿಗಳ ಪಾಲಿಗೆ ಡಿ ಬಾಸ್ ಆಗಿ ವಿಜೃಂಭಿಸಿದ ನಟ ಈಗ ತನಗೆ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಅಲವತ್ತುಕೊಂಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಬೆಂಗಳೂರಿನ ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.
ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್ ತನಗೆ ಜೈಲಿನಲ್ಲಿ ಬದುಕಲು ಆಗುತ್ತಿಲ್ಲ ಬಿಸಿಲು ನೋಡದೆ ಹಲವಾರು ದಿನಗಳು ಕಳೆದಿವೆ. ಫಂಗಸ್ ನಿಂದಾಗಿ ಬಟ್ಟೆಗಳು ವಾಸನೆ ಬರುತ್ತಿವೆ. ನನಗೆ ಬದುಕು ಸಾಕಾಗಿದೆ ದಯವಿಟ್ಟು ವಿಷ ಕೊಡಲು ಆದೇಶ ಹೊರಡಿಸಿ ಎಂದು ಗೋಗರೆದಿದ್ದಾರೆ.
ಈ ಮನವಿಗೆ ನ್ಯಾಯಾಧೀಶರು ನೀವು ಹಾಗೆಲ್ಲ ಕೇಳಬಾರದು. ನಾವು ಆ ರೀತಿಯಲ್ಲಿ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ವಿಚಾರಣೆ ಸಮಯದಲ್ಲಿ ವಿಷ ಕೊಡಿ ಎಂದು ದರ್ಶನ್ ಮೂರು ಬಾರಿ ಬೇಡಿಕೊಂಡರೆ ಫಂಗಸ್ ಆಗಿದೆ ಎಂದು ಹಲವು ಬಾರಿ ಅಳಲು ತೋಡಿಕೊಂಡರು.




