2021ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

4 years ago

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ: 01.01.2021ರಿಂದ 31.12.2021ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟ ಮಿತಿಯಲ್ಲಿರುವ
1)  ಜನಪದ ಗದ್ಯ
2)  ಜನಪದ ಪದ್ಯ
3) ಜನಪದ ವಿಚಾರ-ವಿಮರ್ಶೆ- ಸಂಶೋಧನೆ
4) ಜನಪದ ಸಂಕೀರ್ಣ
ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ದಿನಾಂಕ:31-07-2022 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿ ಕೊಡಲು ಕೋರಿದೆ.

Leave a Reply