ಬೆಂಗಳೂರು: ಉತ್ತರ ತೆಲಂಗಾಣ ಮತ್ತು ವಿದರ್ಭದಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದೆ. ಇದರಿಂದಾಗಿ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಹಿನ್ನೆಲೆಯಲ್ಲಿ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಉತ್ತರ ತೆಲಂಗಾಣ ಮತ್ತು ವಿದರ್ಭದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಚಂಡಮಾರುತ ಉಂಟಾಗಿದೆ. ಇದರ ಕೇಂದ್ರ ಬಿಂದುವನ್ನು ಮಹಾರಾಷ್ಟ್ರ ಕರಾವಳಿಗೆ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 4.5 ಕಿಮೀ ನಡುವೆ ಸರಾಸರಿ ಗುರುತಿಸಲಾಗಿದೆ.
ಇದರ ಪರಿಣಾಮದಿಂದಾಗಿ ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ದಕ್ಷಿಣ ಕರ್ನಾಟಕ ಹಲವು ಕಡೆ ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




