ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 7 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಕದ ಆಚರಿಸಲಾಗುವುದು. ವಾಲ್ಮೀಕಿ ಅವರ ಭಾವಚಿತ್ರವನ್ನು, ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ಆಚರಣೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ವಿವಿಧ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಮನ್ವಯ ವಹಿಸುವಂತೆ ಹಾಗೂ ಪ.ಪಂಗಡದ ವಿವಿಧ ಸಂಘಟನೆಗಳು, ಮುಖಂಡರು ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಅವರು, ಕಾರ್ಯಕ್ರಮದ ದಿನದಂದು ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಹಾಜರಾಗುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಐ.ಎ.ಎಸ್ ಪ್ರೊಬೇಷನರಿ ಅಧಿಕಾರಿ ಝುಪಿಶಾನ ಹಕ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಉಮೇಶ ವೈ.ಕೆ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ಸಂಘಟನೆಯ ಮುಖಂಡರು ಹಾಜರಿದ್ದರು.




