ಬೆಂಗಳೂರು: ಯೋಗ ಕಲಿಯಲು ಯೋಗ ಸೆಂಟರ್ ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬುವರನ್ನು ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಹದಿನೇಳು ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಪೊಲೀಸರು ಕಾಮುಕ ಯೋಗ ಗುರು ನಿರಂಜನಾ ಮೂರ್ತಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಬಂಧಿತ ಆರೋಪಿ ಯೋಗ ಸ್ಪರ್ಧೆ ಟ್ರೋಫಿ ಕೊಡಿಸುವುದು, ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದರು.
ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಸನ್ ಶೈನ್ ಇನ್ಸ್ಟಿಟ್ಯೂಟ್ ಯೋಗ ಕೇಂದ್ರ ನಡೆಸುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ಸರ್ಕಾರಿ ಕೆಲಸ ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್ ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಹಿತಿಯಿದ್ದು ಹೆಚ್ಚಿನ ತನಿಖೆಯನ್ನು ನಡೆಸಲಾಗಿದೆ.
ಅಪ್ರಾಪ್ತ 17 ವರ್ಷದ ಬಾಲಕಿಗೆ 2019ರಿಂದ ಆರೋಪಿ ನಿರಂಜನ್ ಮೂರ್ತಿ ಪರಿಚಯವಿದ್ದು, 2021 ರಿಂದ ಯೋಗ ಸ್ಪರ್ಧೆಗೆ ಭಾಗವಹಿಸಲು ತಯಾರಿ ನಡೆಸಿದ್ದಳು. ಕಳೆದ 2023 ರಲ್ಲಿ ನಿರಂಜನ್ ಮೂರ್ತಿ ಜೊತೆ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಲು ಥಾಯ್ಲೆಂಡ್ ಗೆ ಹೋಗಿದ್ದು, ಬಾಲಕಿಗೆ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಆಕೆ ಯೋಗಾ ಸ್ಪರ್ಧೆಯನ್ನು ಬಿಟ್ಟಿದ್ದರು.
ಬಳಿಕ 2024 ರಲ್ಲಿ ಬಾಲಕಿ ನಿರಂಜನ್ ಮೂರ್ತಿ ನಡೆಸುತ್ತಿದ್ದ ಯೋಗ ಸ್ಪರ್ಧೆಗೆ ಸನ್ ಶೈನ್ ಇನ್ಸ್ಟಿಟ್ಯೂಟ್ ಗೆ ಸೇರಿಕೊಂಡಿದ್ದು, ಮತ್ತೆ ಬಾಲಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ನ್ಯಾಷನಲ್ ಯೋಗ ಸ್ಪರ್ಧೆಯಲ್ಲಿ ಮೆಡಲ್ ಕೊಡಿಸುತ್ತೇನೆ ಹಾಗೂ ಪ್ಲೇಸ್ ಮೆಂಟ್ ಕೊಡಿಸುತ್ತೇನೆಂದು ಆಮಿಷ ಒಡ್ಡಿ ಸನ್ ಶೈನ್ ಇನ್ಸ್ಟಿಟ್ಯೂಟ್ ನಲ್ಲಿ 2025ರ ಆಗಸ್ಟ್ ನಲ್ಲಿ ದೈಹಿಕ ಸಂಪರ್ಕ ನಡೆಸಿ, ಮತ್ತೆ ರಾಜ್ಯ ಮಟ್ಟದಲ್ಲಿ ಪ್ಲೇಸ್ ಮೆಂಟ್ ಕೊಡಿಸುತ್ತೇನೆಂದು ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸಿದ್ದು, ಈ ಸಂಬಂಧ ಸಂತ್ರಸ್ತ ಬಾಲಕಿ ನೀಡಿದ ದೂರು ಆಧರಿಸಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
ಆರೋಪಿ ಹಲವು ಮುಗ್ಧ ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಹಿತಿಯಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಯೋಗ ಗುರುವಿನಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದರೆ ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಲು ಮನವಿ ಮಾಡಿರುವ ಡಿಸಿಪಿ ಗಿರೀಶ್, ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ತಿಳಿಸಿದ್ದಾರೆ.



