ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿದೆ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಪಾತಾಳಕ್ಕೆ ಕುಸಿದಿತ್ತು. ಮೋದಿ ಹೆಸರಿನಲ್ಲಿ ಮೂರನೇ ಚುನಾವಣೆಯಲ್ಲಿ ಮತಗಳನ್ನು ಕಳ್ಳತನ ಮಾಡಿದ್ದಾರೆ. ಬಹುತೇಕ ಎಲ್ಲಾ ಕ್ಷೇತ್ರದಲ್ಲಿ ಮತಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಅವರು ಅಧಿಕಾರದಲ್ಲಿ ಇರುವ ಕಡೆ ಜಾಸ್ತಿ ಮಾಡಿದ್ದಾರೆ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ಅಧಿಕಾರಕ್ಕೆ ಬರುತ್ತಿರಲಿಲ್ಲ. ನಮಗೆ ಈ ವಿಚಾರವಾಗಿ ನ್ಯಾಯ ಸಿಗುವ ಭರವಸೆ ಇಲ್ಲ ಎಂದರು.
ಚುನಾವಣೆ ಆಯೋಗ ಕೇಂದ್ರದ ಕೈಗೊಂಬೆಯಾಗಿದೆ. ಹಾಗಾಗಿ ಮತ ಕಳ್ಳತದ ಬಗ್ಗೆ ಹೈಕೋರ್ಟ್, ಸುಪ್ರೀಂ ಕೋರ್ಟ್ ನಿಂದಷ್ಟೇ ನ್ಯಾಯ ಸಿಗಬೇಕು ಎಂದರು.
ಆಳಂದ, ಗಾಂಧಿ ನಗರದಲ್ಲಿ ಮತ ಕಳ್ಳತನ ಆಗಿದೆ. ಇದಷ್ಟೇ ಅಲ್ಲ, ರಾಜ್ಯದ ಹಲವು ಕಡೆ ನಡೆದಿದೆ. ಮಾಲೂರಿನಲ್ಲಿ ಏನಾದ್ರೂ ಆಕ್ರಮ ಆಗಿದ್ದರೆ ಅದು ಅಕ್ರಮ. ಚುನಾವಣೆ ಸಂದರ್ಭದಲ್ಲಿ ನಮ್ಮ ಸರ್ಕಾರ ಇರಲಿಲ್ಲ. ಬಿಜೆಪಿ ಸರ್ಕಾರ ಇತ್ತಲ್ವಾ? ನಮ್ಮಿಂದ ಅಕ್ರಮ ಆಗಿರಲಿಲ್ಲ ಎಂದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಮತ ಕಳ್ಳತನದ ಬಗ್ಗೆ ದಾಖಲೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಬೇಕು. ಬಿಜೆಪಿಗರ ಮೌನ ಕಳ್ಳತನ ಆಗಿದೆ ಎಂಬುದು ಸಾಬೀತಾಗಿದೆ ಎಂದರು.
ರಾಹುಲ್ ಗಾಂಧಿ ಮಾಡಿರುವ ಆರೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಈ ಬಗ್ಗೆ ಏಕೆ ಹೇಳಿಕೆ ನೀಡುತ್ತಿಲ್ಲ. ಚುನಾವಣೆ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿದರು.




