ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.




